
CHITRADURGA NEWS | 10 FEBRUARY 2024
ಚಿತ್ರದುರ್ಗ: ಟಯರ್ ಸ್ಪೋಟಗೊಂಡ ಪರಿಣಾಮ ರಸ್ತೆಯಲ್ಲೇ ಲಾರಿ ಹೊತ್ತಿ ಉರಿದ ಘಟನೆ ಹಿರಿಯೂರಿನಲ್ಲಿ ನಡೆದಿದೆ.
ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶನಿವಾರ ಮುಂಜಾನೆ ಘಟನೆ ನಡೆದಿದೆ. ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆ ಹೋಗುವ ಮಾರ್ಗ ಮಧ್ಯೆ ಏಕಾಏಕಿ ಕಂಟೇನರ್ ಲಾರಿಯೊಂದರ ಟೈಯರ್ ಸಿಡಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲೇ ಬೆಂಕಿ ಇಡೀ ಲಾರಿಗೆ ವ್ಯಾಪಿಸಿ ಲಾರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಇದನ್ನೂ ಓದಿ: 2024ಕ್ಕೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಯಾಕೆ ? | ಆಟೋ ಪ್ರಚಾರಕ್ಕೆ ಚಾಲನೆ

ಸ್ಥಳಕ್ಕೆ ಅಂಬುಲೆನ್ಸ್ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
