ಮುಖ್ಯ ಸುದ್ದಿ
Seminor: ಮೂಲ ನಕ್ಷೆಯಲ್ಲಿ ಮುಖ್ಯ ರಸ್ತೆಗಳು ವಿಶಾಲವಾಗಿವೆ | ಡಿಸಿ ಟಿ.ವೆಂಕಟೇಶ್
CHITRADURGA NEWS | 01 SEPTEMBER 2024
ಚಿತ್ರದುರ್ಗ: ಚಳ್ಳಕೆರೆ ಹಾಗೂ ಚಿತ್ರದುರ್ಗ ನಗರದ ಮೂಲ ನಕ್ಷೆಯಲ್ಲಿ ನಗರದ ಪ್ರಮುಖ ಬೀದಿಗಳು ಈಗ ಇರುವ ವಿಸ್ತೀರ್ಣದ ನಾಲ್ಕರಷ್ಟು ಅಗಲವಾಗಿವೆ. ಆದರೆ ಒತ್ತುವರಿಯಿಂದ ಕಿರಿದಾಗಿವೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದ್ದಾರೆ.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿμÉೀಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಕುರಿತ ಕಾರ್ಯಾಗಾರದಲ್ಲಿ (Seminor) ಮಾತನಾಡಿದ್ದಾರೆ.
ಇದನ್ನೂ ಓದಿ: ಹಬ್ಬಿದಾ ಮಲೆ ಮಧ್ಯದೊಳಗೆ | ಬಯಲು ಸೀಮೆಯ ಮಹಾ ಕಾದಂಬರಿ | ಹೂತಿಟ್ಟ ಚಿನ್ನಕ್ಕಾಗಿ ಹುಡುಕಾಟ
ನಗರದ ಪ್ರಮುಖ ರಸ್ತೆಗಳ ಒತ್ತುವರಿ, ಭೂ ಕಬಳಿಕೆ, ಅಧಿಕಾರಿಗಳ ನಿರ್ಲಕ್ಷ್ಯ ಕಾರಣವಾಗಿದೆ. ಒತ್ತುವರಿ ಜಾಗ ತೆರವು ಗೊಳಿಸದೇ, ಅವುಗಳಿಗೆ ಖಾತೆ ಮಾಡಿಕೊಡಲಾಗಿದೆ. ಇಂದರಿಂದಾಗಿ ಒತ್ತುವರಿದಾರರು ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಿ ಕೂತಿದ್ದಾರೆ ಎಂದರು.
ನಗರದ ಹಳೆಯ ಭೂ ನಕ್ಷೆಯ ಪ್ರಕಾರ ಒಂದು ನಯಾಪೈಸೆ ಪರಿಹಾರ ನೀಡದೇ ಚಿತ್ರದುರ್ಗ ಹಾಗೂ ಹಿರಿಯೂರು ನಗರಗಳಲ್ಲಿ ಒತ್ತುವರಿ ತೆರವುಗೊಳಿಸಬಹುದಾಗಿದೆ.
ಇದನ್ನೂ ಓದಿ: ಸಂಸದ ಗೋವಿಂದ ಕಾರಜೋಳ ಅವರ ಹೊಸ ಕಚೇರಿ ಹೇಗಿದೆ ಗೊತ್ತಾ
ಚಳ್ಳಕೆರೆ ನಗರದಲ್ಲಿ ಈಗಾಗಲೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ಹೇಳಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ 72 ಸಾವಿರ ಹೆಕ್ಟೇರ್ ಭೂಮಿ ಒತ್ತುವರಿ:
ಚಿತ್ರದುರ್ಗ ಜಿಲ್ಲೆಯಲ್ಲಿ 7,70,702 ಹೆಕ್ಟೇರ್ ವಿಶಾಲ ಪ್ರದೇಶದಲ್ಲಿ, 2,06,594 ಹೆಕ್ಟೇರ್ ಜಾಗ ಕಂದಾಯ ಇಲಾಖೆ ಸುಪರ್ದಿಯಲ್ಲಿದೆ. ಇದರಲ್ಲಿ ಸುಮಾರು 72,000 ಹೆಕ್ಟೇರ್ ನಷ್ಟು ಜಾಗ ಒತ್ತುವರಿಯಾಗಿದೆ ಎಂಬ ಮಾಹಿತಿ ಇದೆ ಎಂದು ಜಿಲ್ಲಾಧಿಕಾರಿಗಳು ಅಂದಾಜಿಸಿದ್ದಾರೆ.
ಈ ಒತ್ತುವರಿ ಜಾಗಗಳಿಗೆ ಫಾರಂ 50, 53 ಹಾಗೂ 57 ಅಡಿ ಭೂಮಿ ಮಂಜೂರಿಗೆ ಸಾಕಷ್ಟು ಜನರು ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗ ಹಿಂದುಳಿದ ಜಿಲ್ಲೆ, 3 ಎಕರೆಗಿಂತ ಕಡಿಮೆ ಜಾಗ ಒತ್ತುವರಿಯಾಗಿದ್ದು, ಅದನ್ನು ತೆರವು ಮಾಡುವುದರಿಂದ ಜೀವನ ಆಧಾರಕ್ಕೆ ತೊಂದರೆಯಾಗುತ್ತದೆ ಎನ್ನುವ ಅಂಶಗಳ ಹಿನ್ನೆಲೆಯಲ್ಲಿ ಈ ಒತ್ತುವರಿ ತೆರವುಗೊಳಿಸಿರಲಿಕ್ಕಿಲ್ಲ.
ಇದನ್ನೂ ಓದಿ: ಸೇನೆಯಿಂದ ನಿವೃತ್ತಿ ಹೊಂದಿ ಬರುತ್ತಿರುವ ಯೋಧನ ಸ್ವಾಗತಕ್ಕೆ ಅದ್ದೂರಿ ಸಿದ್ಧತೆ
ಈ ಎಲ್ಲಾ ಅಂಶಗಳ ಹೊರತಾಗಿಯೂ ಒತ್ತುವರಿಯಾದ 72,000 ಹೆಕ್ಟೇರ್ ಪೈಕಿ 15,000 ಹೆಕ್ಟೇರ್ ಭೂಮಿ ಒತ್ತುವರಿ ತೆರವುಗೊಳಿಸಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.
ಕಂದಾಯ ಇಲಾಖೆ ಭೂಮಿ ಹೊರತಾಗಿ ಅರಣ್ಯ, ಮುಜುರಾಯಿ, ಸ್ಮಶಾನ, ಕೆರೆ ಒತ್ತುವರಿ ಪ್ರಕರಣಗಳು ಜಿಲ್ಲೆಯಲ್ಲಿವೆ. ವಿಶೇಷ ಭೂ ಕಬಳಿಕೆ ನಿμÉೀಧ ನ್ಯಾಯಾಲಯ, ಸುಪ್ರಿಂಕೋರ್ಟ್ ಹಸಿರು ನ್ಯಾಯಾಲಯಗಳ ಆದೇಶವಿದ್ದರೂ, ಕೆರೆ ಒತ್ತುವರಿ ಪೂರ್ಣ ಪ್ರಮಾಣದಲ್ಲಿ ತೆರವು ಆಗಿಲ್ಲ.
ಇದನ್ನೂ ಓದಿ: ಗ್ರಾಮ ಸಹಾಯಕರ ಹುದ್ದೆ | ಅರ್ಜಿ ಸಲ್ಲಿಕೆ ಅವಧಿ ಸೆ.9ರವರೆಗೆ ವಿಸ್ತರಣೆ
ಜಿಲ್ಲೆಯಲ್ಲಿ ಮಳೆ ಬೀಳುವ ಪ್ರಮಾಣ ಕಡಿಮೆಯಿದೆ. ಅಂತರ್ಜಲ ಮಟ್ಟ ಕೂಡ ಕುಸಿದಿದೆ. ಸಣ್ಣ ನೀರಾವರಿ, ಜಲಾನಯನ ಸೇರಿದಂತೆ, ಕೆ.ಎಂ.ಇ.ಆರ್.ಸಿ ಹಾಗೂ ಡಿ.ಎಂ.ಎಫ್ ನಿಧಿಗಳ ಅಡಿ ಸಾವಿರಾರು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗಿದೆ. ದುರಂತವೆಂದರೆ ಈ ಜಲಮೂಲಗಳ ಸಂಗ್ರಹಕ್ಕೆ ಬೇಕಾದ ಕೆರೆಗಳೇ ಒತ್ತುವರಿಯಾಗಿವೆ. ಇದರಿಂದ ಹಣವೂ ವ್ಯರ್ಥವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬೇಸರ ವ್ಯಕ್ತಪಡಿಸಿದರು.
ಸರ್ಕಾರಿ ಜಾಗಗಳ ರಕ್ಷಣೆ ಹೊಣೆ ಆಯಾ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಭೂ ರಕ್ಷಣೆ ಸಂಬಂದಿಸಿದಂತೆ, ಭೂ ಕಬಳಿಕೆ ನಿμÉೀಧ, ಮೋಜಣಿ, ಕರ್ನಾಟಕ ಭೂ ಕಂದಾಯ, ನಗರ ಪಾಲಿಕೆ, ಪಂಚಾಯತ್ ರಾಜ್, ಕೆರೆ ಸಂರಕ್ಷಣೆ ಅಭಿವೃದ್ಧಿ ಪ್ರಾಧಿಕಾರ, ಅರಣ್ಯ ಸಂರಕ್ಷಣೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಹಾಗೂ ವಕ್ಫ್ ಅಧಿನಿಯಮಗಳನ್ನು ಸರ್ಕಾರ ಜಾರಿಗೊಳಿಸಿದೆ.
ಇದನ್ನೂ ಓದಿ: ಇಂದಿನಿಂದ ಬೆಸ್ಕಾಂ ಹೊಸ ನಿಯಮ | 30 ದಿನಗಳಲ್ಲಿ ಬಿಲ್ ಕಟ್ಟದಿದ್ದರೆ ಕರೆಂಟ್ ಕಟ್
ಕಾರ್ಯಕ್ರಮದಲ್ಲಿ ಭೂದಾಖಲೆಗಳ ಅಪರ ನಿರ್ದೇಶಕ ಕೆ.ಜಯಪ್ರಕಾಶ್, ಭೂ ಕಬಳಿಕೆ ನಿμÉೀಧ ವಿಶೇಷ ನ್ಯಾಯಲಯದ ಕಂದಾಯ ಸದಸ್ಯರಾದಎಸ್.ಪಾಲಯ್ಯ, ಅಶ್ವತ್ಥನಾರಾಯಣ ಗೌಡ.ಕೆ.ಹೆಚ್, ವಿಲೇಖನಾಧಿಕಾರಿ ಹೆಚ್.ಕೆ.ನವೀನ್, SP ರಂಜೀತ್ ಕುಮಾರ್ ಬಂಡಾರು, ಹೆಚ್ಚುವರು ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ವಂದನೆ ಸಲ್ಲಿಸಿದರು.
ಕಳೆದ ಜೂನ್ ತಿಂಗಳೊಂದರಲ್ಲಿಯೇ ವಿಶೇಷ ನ್ಯಾಯಾಲಯದ ಮುಂದೆ ಇದ್ದ ಹಲವು ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ, ರಾಜ್ಯಾದ್ಯಂತ ಭೂ ಕಬಳಿಕೆಯಾಗಿದ್ದ 224.4 ಎಕರೆ ಒತ್ತುವರಿ ಜಮೀನನ್ನು ಮರಳಿ ಸರ್ಕಾರದ ಸುಪರ್ದಿಗೆ ವಹಿಸಿ ಆದೇಶ ನೀಡಲಾಗಿದೆ.
| ಬಿ.ಎ.ಪಾಟೀಲ್, ಕರ್ನಾಟಕ ಭೂ ಕಬಳಿಕೆ ನಿμÉೀಧ ವಿಶೇಷ ನ್ಯಾಯಾಲಯದ ಅಧ್ಯಕ್ಷರು.