
CHITRADURGA NEWS | 15 JULY 2024
ಚಿತ್ರದುರ್ಗ: ಪತ್ನಿಯ ಶೀಲ ಶಂಕಿಸಿ ನಡು ರಸ್ತೆಯಲ್ಲೇ ಕೊಲೆ ಮಾಡಿದ್ದ ಹಂತಕನಿಗೆ ಚಿತ್ರದುರ್ಗದ 1ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
ಚಿತ್ರದುರ್ಗ ನಗರದ ಜೋಗೇಶಪಾಳ್ಯ ನಿವಾಸಿ, ಆಟೋ ಚಾಲಕ ಇಸ್ಮಾಯಿಲ್ ಜಬೀವುಲ್ಲಾ ಶಿಕ್ಷೆಗೊಳಗಾದ ಅಪರಾಧಿ. ಈತ ತನ್ನ ಪತ್ನಿ ಸೈಯದ್ ಮುಬಾರಕ್ ಉನ್ನಿಸಾ ಅವರನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದ.
ಇದನ್ನೂ ಓದಿ: ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ಅನೇಕ ಸಲ ಪತ್ನಿಯ ಜೊತೆ ಜಗಳ ಮಾಡುತ್ತಿದ್ದು, ಸೈಯದ್ ಮುಬಾರಕ್ ಉನ್ನಿಸಾ ಅವರ ಅಣ್ಣ ಸೈಯದ್ ಸಿಗ್ಬತ್ ಉಲ್ಲಾ ರಾಜಿ ಮಾಡಿ ಸರಿ ಮಾಡಿದ್ದರು.
2022 ಫೆಬ್ರವರಿ 13 ರಂದು ನಸುಕಿನ 3 ಗಂಟೆ ಸಮಯದಲ್ಲಿ ಮನೆಯಲ್ಲಿ ಇಸ್ಮಾಯಿಲ್ ಜಬೀವುಲ್ಲಾ ಪತ್ನಿ ಸೈಯದ್ ಮುಬಾರಕ್ ಉನ್ನಿಸಾ ಜೊತೆಗೆ ಜಗಳ ತೆಗೆದು ಹೊಡೆಯುತ್ತಿದ್ದಾನೆ. ಈ ವೇಳೆ ಮನೆಯಿಂದ ಹೊರಗೆ ಬಂದು ರಸ್ತೆಗೆ ಓಡಿ ಬಂದ ಮುಬಾರಕ್ ಉನ್ನಿಸಾ ಅವರನ್ನು ರಸ್ತೆಯಲ್ಲಿ ಸಿಕ್ಕಿದ ಇಟ್ಟಿಗೆಯಿಂದ ಹೊಡೆದಿದ್ದು, ಈ ವೇಳೆ ಆಕೆ ಮೃತಪಟ್ಟಿದ್ದಾಳೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಗೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಈ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಪಿಐ ಎಂ.ಎಸ್.ರಮೇಶ್ ರಾವ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ 1ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಶಂಕರಪ್ಪ ನಿಂಬಣ್ಣ ಕಲ್ಕನಿ ಸಾಕ್ಷ್ಯಗಳ ಮೂಲಕ ಆರೋಪ ಸಾಬೀತಾದ್ದರಿಂದ ಇಸ್ಮಾಯಿಲ್ ಜಬೀವುಲ್ಲಾಗೆ 35 ಸಾವಿರ ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಇದನ್ನೂ ಓದಿ: ಭಾನುವಾರ ಎಲ್ಲೆಲ್ಲಿ ಎಷ್ಟು ಮಳೆಯಾಯ್ತು? ಈ ವರದಿ ಓದಿ..
ಆರೋಪಿ ಈಗಾಗಲೇ 2 ವರ್ಷ 4 ತಿಂಗಳು ಜೈಲಿನಲ್ಲಿ ಕಳೆದಿದ್ದು, ಉಳಿದಂತೆ ಜೀವಾವಧಿ ಶಿಕ್ಷೆ ಅನುಭವಿಸಲು ತಿಳಿಸಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ(ಸರ್ಕಾರದಿಂದ) ಕಲಂ 357(ಬಿ) ಅಡಿಯಲ್ಲಿ ಬರುವ ಪರಿಹಾರವನ್ನು ಮೃತಳ ತಾಯಿ ಸೈಯದ್ ಅಕ್ತರುನ್ನಿಸಾ ಮತ್ತು ಮೃತ ಸೈಯದ್ ಮುಬಾರಕ್ ಉನ್ನಿಸಾ ಅವರ ಮೂರು ಪುಟ್ಟ ಮಕ್ಕಳಿಗೆ ನೀಡಲು ಕಾನೂನು ಪ್ರಾಧಿಕಾರಕ್ಕೆ ಆದೇಶಿಸಿದೆ.
ಇದನ್ನೂ ಓದಿ: ಸಾಸಿವೆಹಳ್ಳಿ ಏತ ನೀರಾವರಿ ಕಾಮಗಾರಿ ವೀಕ್ಷಿಸಿದ ಭೀಮಸಮುದ್ರ ರೈತರು
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಅಪರ ಸರ್ಕಾರಿ ಅಭಿಯೋಜಕ ಎನ್.ಎಸ್.ಮಲ್ಲಯ್ಯ ವಾದ ಮಂಡಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

