CHITRADURGA NEWS | 14 November 2026
ಚಿತ್ರದುರ್ಗ: ಬಾಲ್ಯದ ನೆನಪುಗಳು ಜೀವನದುದ್ದಕ್ಕೂ ಮರೆಯಲಾಗದು. ಅದರಲ್ಲೂ ತಾವು ಪ್ರಾಥಮಿಕ ಶಿಕ್ಷಣ ಪಡೆದ ಶಾಲೆಗೆ ಮರಳಿ ಭೇಟಿ ನೀಡುವುದು ವಿಶೇಷ ಅನುಭವ ಎಂದು ಸಚಿವ ಟಿ. ರಘುಮೂರ್ತಿ ಹೇಳಿದರು.
ಇದನ್ನೂ ಓದಿ: ಇ-ಸ್ವತ್ತು ಅರ್ಜಿ ವಿಲೇವಾರಿಗೆ ವಾರ್ಡ್ವಾರು ವೇಳಾಪಟ್ಟಿ | ಜಿಲ್ಲಾಧಿಕಾರಿ
ಮಕ್ಕಳ ದಿನಾಚರಣೆ ಅಂಗವಾಗಿ ಚಿತ್ರದುರ್ಗ ತಾಲೂಕಿನ ಕಡಬನಕಟ್ಟೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಮಕ್ಕಳೊಂದಿಗೆ ಸಂವಾದ ನಡೆಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, 1967-68ರಲ್ಲಿ ಇದೇ ಶಾಲೆಯಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆದು ಏಳನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದೇನೆ. ಈ ಶಾಲೆಯೇ ನನಗೆ ಅಕ್ಷರ ಕಲಿಸಿ, ಮುಂದಿನ ದಿನಗಳಲ್ಲಿ ಇಂಜಿನಿಯರ್ ಆಗುವ ಅವಕಾಶ ಕಲ್ಪಿಸಿತು. ಸಚಿವನಾದ ಬಳಿಕ ಮೊದಲ ಬಾರಿಗೆ ಮಕ್ಕಳ ದಿನಾಚರಣೆಯಂದು ನನ್ನ ಶಾಲೆಗೆ ಭೇಟಿ ನೀಡಿರುವುದು ಸಂತಸ ತಂದಿದೆ ಎಂದರು.
ಶಾಲೆಯಲ್ಲಿ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಮಕ್ಕಳಿಂದ ಹಾಗೂ ಶಿಕ್ಷಕರಿಂದ ಮಾಹಿತಿ ಪಡೆದ ಅವರು, ಶಾಲೆ ಮತ್ತು ಸುತ್ತಮುತ್ತಲ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಶಾಲೆಯ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಸಾಣೇಹಳ್ಳಿ ಶ್ರೀ ಅಮೃತ ಮಹೋತ್ಸವ | 75 ಸಾಧಕರಿಗೆ ಶಿವಸಂಚಾರ ಪುರಸ್ಕಾರ
ಮುಖ್ಯಶಿಕ್ಷಕ ಕೆ. ಸುದರ್ಶನ ಹಾಗೂ ಶಿಕ್ಷಕರು, ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿದರು.
ಮಕ್ಕಳ ದಿನಾಚರಣೆಯಂದೇ ತಾವು ಓದಿದ ಶಾಲೆಗೆ ಭೇಟಿ ನೀಡಿರುವುದು ಜೀವನದ ಮರೆಯಲಾಗದ ಸ್ಮರಣೀಯ ಕ್ಷಣವಾಗಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

