
CHITRADURGA NEWS | 22 JULY 2025
ಚಿತ್ರದುರ್ಗ: ಸೊಳ್ಳೆ ಚಿಕ್ಕದು, ಕಾಟ ದೊಡ್ಡದು. ತಾತ್ಸಾರ ಮಾಡಿದರೆ ಸಾವು ಬರಬಹುದು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾದ ಡೆಂಗ್ಯೂ ವಿರೋಧ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಳೆಗಾಲವಾದ್ದರಿಂದ ಮನೆಯ ಹೊರಗಡೆ ಘನ ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗಿ ಈಡೀಸ್ ಜಾತಿಯ ಸೊಳ್ಳೆ ಉತ್ಪತ್ತಿಯಾಗುತ್ತಿದ್ದು, ಹಗಲು ವೇಳೆ ಮನೆಯಲ್ಲಿ ವೃದ್ಧರು, ಮಕ್ಕಳು ಬಾಣಂತಿಯರು ವಿರಾಮ ಪಡೆಯುವ ಸಂದರ್ಭದಲ್ಲಿ ಸೊಳ್ಳೆ ಕಚ್ಚುವ ಸಾಧ್ಯತೆ ಇದ್ದು, ಡೆಂಗ್ಯೂ ಜ್ವರ ಬರಬಹುದು. ಪ್ರಯುಕ್ತ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಿ ಘನತ್ಯಾಜ್ಯ ವಿಲೇವಾರಿ ಮಾಡಿ ಸೊಳ್ಳೆ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಡೆಂಗ್ಯೂ ಜ್ವರಬಾರದಂತೆ ನಿಗಾ ವಹಿಸಬೇಕು ಎಂದರು.
ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಮಕ್ಕಳ ತಜ್ಞರು ಆದ ಡಾ. ಪ್ರವೀಣ್ ಮಾತನಾಡಿ, ಆರೋಗ್ಯ ಇಲಾಖೆಯ ಅಧಿಕಾರಿ ವೃಂದದವರು, ಆಶಾ ಕಾರ್ಯಕರ್ತೆಯರು, ಲಾರ್ವ ಸರ್ವೆ ಮಾಡಲು ಸಾರ್ವಜನಿಕರ ಮನೆ ಭೇಟಿ ಮಾಡಲು ಬಂದಾಗ ಸಹಕರಿಸಿರಿ. ಕೀಟಜನ್ಯ ರೋಗಗಳ ನಿಯಂತ್ರಣಕ್ಕೆ ಕೈಜೋಡಿಸಿರಿ ಎಂದು ಸಾರ್ವಜನಿಕರಿಗೆ ಕರೆ ನೀಡಿದರು.
ಇದನ್ನೂ ಓದಿ: ಕಿಡ್ನಿ ಸಮಸ್ಯೆ ಇರುವವರು ಪ್ರತಿದಿನ ಕಾಫಿ ಕುಡಿಯಬಹುದೇ?
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ ಮೂಗಪ್ಪ ಮಾತನಾಡಿ, ಇದ್ದಕ್ಕಿದ್ದಂತೆ ಜ್ವರ ಬರುವುದು ಕಣ್ಣಿನ ಹಿಂಬಾಗ ನೋವು ಕೀಲು ಕಾಲುಗಳಲ್ಲಿ ನೋವು ಇವು ಡೆಂಗ್ಯೂ ಜ್ವರದ ಲಕ್ಷಣಗಳು. ಡೆಂಗ್ಯೂ ಜ್ವರಕ್ಕೆ ನಿಗದಿತವಾದ ಚಿಕಿತ್ಸೆ ಲಭ್ಯವಿರುವುದಿಲ್ಲ.
ರೋಗ ಲಕ್ಷಣಗಳಿಗನುಸಾರ ವೈದ್ಯರು ಚಿಕಿತ್ಸೆಯನ್ನ ನೀಡುತ್ತಿದ್ದು, ಯಾವುದೇ ಜ್ವರವಿರಲಿ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿ, ಹಗಲು ಮತ್ತು ರಾತ್ರಿ ಕೂಡ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಮೈತುಂಬ ಬಟ್ಟೆ ಧರಿಸುವುದು ಶಾಲೆಗೆ ಹೋಗುವ ಮಕ್ಕಳು ಕೈಕಾಲುಗಳಿಗೆ ಕೊಬ್ಬರಿ ಎಣ್ಣೆ ಲೇಪನ ಮಾಡಿಕೊಂಡು ಸೊಳ್ಳೆ ಕಚ್ಚಿಸಿಕೊಳ್ಳದಂತೆ ನಿಗಾ ವಹಿಸಬೇಕು ಎಂದರು.
ಮನೆಯಲ್ಲಿನ ನೀರಿನ ತಾಣಗಳನ್ನು ವಾರಕ್ಕೆರಡು ಬಾರಿ ಸ್ವಚ್ಛಗೊಳಿಸಿ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಡೆಂಗ್ಯೂ ಜ್ವರ ಹರಡದಂತೆ ಮುಂಜಾಗ್ರತೆ ವಹಿಸಬೇಕೆಂದರು.
ಇದನ್ನೂ ಓದಿ: ಕೋಪಗೊಂಡ ಸಂಗಾತಿಯ ಮನವೊಲಿಸುವಾಗ ಈ 3 ತಪ್ಪನ್ನು ಮಾಡಬೇಡಿ
ಕಾರ್ಯಕ್ರಮದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಕಾತ್ಯಾಯನಮ್ಮ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆಂಜನೇಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಮಂಜುನಾಥ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ರಜಿಯಾ ಬೇಗಂ, ನಾಗರತ್ನ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಂದೀಪ್, ಮಹಾಂತೇಶ್, ವಿನಯ್ ಸಿಂಧ್ಯಾ, ಸಮುದಾಯ ಆರೋಗ್ಯ ಅಧಿಕಾರಿ ನಿರುಷ, ಸುಧಾ, ಆಶಾ ಕಾರ್ಯಕರ್ತೆಯರು ಸಾರ್ವಜನಿಕರು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
