
CHITRADURGA NEWS | 20 DECEMBER 2024
ಚಿತ್ರದುರ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ.
ಕ್ಲಿಕ್ ಮಾಡಿ ಓದಿ: ಭದ್ರಾ ಮೇಲ್ದಂಡೆ ಅನುದಾನಕ್ಕೆ | ಸಂಸದರ ನಿಯೋಗದಿಂದ ಮನವಿ

ಚಳ್ಳಕೆರೆ ತಾಲೂಕು,ಆಂಧ್ರ ಗಡಿಭಾಗದ ನಾಗಪ್ಪನಹಳ್ಳಿ ಗೇಟ್‌ನಲ್ಲಿ ಈ ಘಟನೆ ನಡೆದಿದೆ.
ಕೊಲೆಯಾದ ಯುವಕ ಆಂಧ್ರಪ್ರದೇಶದ, ಅನಂತಪುರ ಜಿಲ್ಲೆಯ ಕಲ್ಯಾಣದುರ್ಗ ತಾಲೂಕು, ವಡ್ಡೇಂ ಪಾಳ್ಯದ ಗಿತ್ತರಾಜು(28) ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಮನೆ ಶಿಫ್ಟಿಂಗ್ ಕೆಲಸ ಮಾಡಿಕೊಂಡಿದ್ದ ಗಿತ್ತರಾಜು ಕಳೆದ ವಾರ ಊರಿಗೆ ಬಂದಿದ್ದ.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಡಿಸೆಂಬರ್ 20 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪ್ರಯಾಣದಲ್ಲಿ ಎಚ್ಚರ, ವ್ಯಾಪಾರದಲ್ಲಿ ಲಾಭ
ಡಿ.18 ರಂದು ರಾತ್ರಿ ಊಟ ಮುಗಿಸಿ ಮನೆಯಿಂದ ಹೊರಗೆ ಬಂದವನು ಡಿ.19 ರಂದು ರಾತ್ರಿ ಹೆಣವಾಗಿ ಪತ್ತೆಯಾಗಿದ್ದಾನೆ.
ಈ ಸಂಬಂಧ ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
