
CHITRADURGA NEWS | 12 JUNE 2024
ಚಿತ್ರದುರ್ಗ: ಜಗಳ ಬಿಡಿಸಲು ಹೋದ ವ್ಯಕ್ತಿಯ ಕಪಾಳಕ್ಕೆ ಹೊಡೆತ ಬಿದ್ದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಮೃತಪಟ್ಟ ಘಟನೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ.
ಗೋಪನಹಳ್ಳಿ ಗ್ರಾಮದ ಬಿ.ತಿಪ್ಪೇಸ್ವಾಮಿ (47) ಮೃತ ವ್ಯಕ್ತಿ. ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಶುರುವಾಗಿದೆ.
ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ | ಹಲವು ಸಂಘಟನೆಗಳು ಭಾಗಿ

‘ಈ ವೇಳೆ ಗ್ರಾಮದ ಜಿ.ಶಶಿ ಎಂಬುವರು ಏಕಾಏಕಿ ಮನೆಗೆ ನುಗ್ಗಿ ಗಲಾಟೆ ಮಾಡಿ, ಪುತ್ರ ದಿನೇಶ್‌ಗೆ ಹೊಡೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪತಿ ಬಿ.ತಿಪ್ಪೇಸ್ವಾಮಿ ಅವರ ಕಪಾಳಕ್ಕೆ ಬಲವಾಗಿ ಹೊಡೆದಿದ್ದರಿಂದ ಅವರು ಮೃತಪಟ್ಟಿದ್ದಾರೆ’ ಎಂದು ಮೃತರ ಪತ್ನಿ ಲಕ್ಕಮ್ಮ ಠಾಣೆಗೆ ದೂರು ನೀಡಿದ್ದಾರೆ.
ಪತಿ ಸಾವಿಗೆ ಕಾರಣರಾದ ಜಿ.ಶಶಿ, ಎಂ.ರಾಜ ಹಾಗೂ ಜಿ.ಅಶೋಕ ಎಂಬುವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪಿಎಸ್‍ಐ ಸತೀಶ್‍ನಾಯ್ಕ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
