By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    3 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    3 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    14 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    14 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    5 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    3 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    4 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಲೋಕಸಭೆ ಚುನಾವಣೆ | 600 ಜನರ ಮೇಲೆ ದೂರು ದಾಖಲಿಸಿದ ಪೊಲೀಸ್ ಇಲಾಖೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಲೋಕಸಭೆ ಚುನಾವಣೆ | 600 ಜನರ ಮೇಲೆ ದೂರು ದಾಖಲಿಸಿದ ಪೊಲೀಸ್ ಇಲಾಖೆ

chitradurganews.com
Last updated: 24 February 2024 08:06
chitradurganews.com
2 years ago
Share
SHARE

CHITRADURGA NEWS | 24 FEBRUARY 2024

ಚಿತ್ರದುರ್ಗ: ಲೋಕಸಭೆ ಚುನಾವಣೆಗೆ ಅಧಿಕಾರಿಗಳು ಸರ್ವ ಸಿದ್ಧತೆಯನ್ನೂ ಮಾಡಿಕೊಳ್ಳುತ್ತಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 600 ಜನರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ-2024 ಅಂಗವಾಗಿ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಈ ಕುರಿತು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಬರ ತಂದ ಕಾಂಗ್ರೆಸ್ | ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ

ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಇಷ್ಟು ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿದ್ದು, ಈ ಬಗ್ಗೆ ಉಪವಿಭಾಗಾಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ದೂರು ದಾಖಾಲಾಗಿರುವ ವ್ಯಕ್ತಿಗಳಿಂದ ಸೂಕ್ತ ರೀತಿಯ ಬಾಂಡ್‍ಗಳನ್ನು ತೆಗೆದುಕೊಳ್ಳುವುದು ಅಥವಾ ಗಡಿಪಾರು ಮಾಡುವ ಆದೇಶ ಹೊರಡಿಸಬೇಕಿದೆ ಎಂದು ಹೇಳಿದ್ದಾರೆ.

ಚುನಾವಣೆ ಕಾರ್ಯದಲ್ಲಿ ಪೊಲೀಸ್ ಇಲಾಖೆ ಹಿಂಬದಿಯಲ್ಲಿ ನಿಂತು ಕಾರ್ಯನಿರ್ವಹಿಸುತ್ತದೆ. ಸಾರ್ವಜನಿಕ ಆಡಳಿತದ ಅಧಿಕಾರಿಗಳೆ ಮುಂದೆ ನಿಂತು ಚುನಾವಣೆ ಕಾರ್ಯ ಜರುಗಿಸುತ್ತಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಶುಕ್ರವಾರ ಮಾರುಕಟ್ಟೆಯಲ್ಲಿ ಯಾವ ಅಡಿಕೆ ರೇಟ್ ಎಷ್ಟಿತ್ತು

ಚುನಾವಣಾ ಅಕ್ರಮ ಕುರಿತಂತೆ ನೇರವಾಗಿ ಪೊಲೀಸರು ಪ್ರಕರಣ ದಾಖಲಿಸಲು ಬರುವುದಿಲ್ಲ. ಸಂಬಂಧಪಟ್ಟ ಚುನಾವಣೆ ಮ್ಯಾಜಿಸ್ಟ್ರೇಟ್‍ಗಳು ಪ್ರಕರಣದ ಕುರಿತು ದೂರು ದಾಖಲಿಸಬೇಕು. ಇದರ ಆಧಾರದಲ್ಲಿ ಪೊಲೀಸರು ಗುರುತಿಸಲಾಗದ ಅಪರಾಧ [Non cognizable] ಪ್ರಕರಣ ಎಂದು ವರದಿ ಮಾಡಿಕೊಂಡು, ನ್ಯಾಯಾಲಯದ ಅನುಮತಿ ಪಡೆದು ಎಫ್.ಐ.ಆರ್ ದಾಖಲಿಸುತ್ತಾರೆ ಎಂದು ತಿಳಿಸಿದರು.

ಇನ್ನೂ ಮತದಾನ ಮಾಡುವ ಇವಿಎಂ ಯಂತ್ರಗಳನ್ನು ಯಾವುದೇ ಕಾರಣಕ್ಕೂ ಖಾಸಗಿ ವಾಹನಗಳಲ್ಲಿ ಸಾಗಿಸಬಾರದು. ಪ್ರತಿ ಬಾರಿಯೂ ಇವಿಎಂಗಳನ್ನು ಕೊಂಡಯ್ಯುವಾಗ ತಪ್ಪದೇ ಪೊಲೀಸ್ ರಕ್ಷಣೆ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಗ್ರಾನೈಟ್ ತುಂಬಿದ್ದ ಲಾರಿಗೆ ಈಚರ್ ಡಿಕ್ಕಿ, ಚಾಲಕ ಸಾವು

ಈಗಾಗಲೇ ಅಂತರಾಜ್ಯ ಗಡಿಗಳಲ್ಲಿ ಪೊಲೀಸ್ ತಪಾಸಣೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದರೊಂದಿಗೆ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಅಂತರ್ ಇಲಾಖೆ ಚೆಕ್ ಪೊಸ್ಟ್‍ಗಳನ್ನು ಸ್ಥಾಪಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಹೇಳಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಎಲ್ಲ ತಾಲೂಕುಗಳ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಖುದ್ದು ಭೇಟಿ ನೀಡಿ ವಸ್ತುಸ್ಥಿತಿ ಕುರಿತು ವರದಿ ಸಲ್ಲಿಸಿ. ಚುನಾವಣಾ ಆಯೋಗದ ನಿರ್ದೇಶನದಂತೆ ಮೂಲ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಪಕ್ಷದ ತೀರ್ಮಾನಕ್ಕೆ ನಾನು ಬದ್ಧ | ಎ.ಮುರುಳಿ

ಮತಗಟ್ಟೆಗಳಲ್ಲಿ ವಿದ್ಯುತ್, ಕುಡಿಯುವ ನೀರು, ಶೌಚಾಲಯ, ವಿಕಲಚೇತರನರಿಗೆ ರ್ಯಾಂಪ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಮತಗಟ್ಟೆ ಕೇಂದ್ರಗಳಲ್ಲಿ ಇರಬೇಕು ಎಂದು ವಿವರಿಸಿದರು.

ಚುನಾವಣೆ ಆಯೋಗದ ನಿರ್ದೇಶನದಂತೆ ಅಗತ್ಯ ತುರ್ತು ಸೇವಾ ಕಾರ್ಯಗಳಲ್ಲಿ ತೊಡಗಿರುವ ಸಿಬ್ಬಂದಿ ಹೊರತು ಪಡಿಸಿ, ಉಳಿದ ಸಿಬ್ಬಂದಿ ಪಟ್ಟಿ ಸಿದ್ಧಪಡಿಸಿ ಚುನಾವಣೆ ಕಾರ್ಯಕ್ಕೆ ನಿಯೋಜಿಸಬೇಕು. ಚುನಾವಣೆ ಕಾರ್ಯಕ್ಕೆ ಬೇಕಾದ ಒಟ್ಟು ಸಿಬ್ಬಂದಿ ಬಲಕ್ಕೆ ಸರಿಸಮನಾಗಿ ಶೇ.20 ರಷ್ಟು ಸಿಬ್ಬಂದಿ ಬಲವನ್ನು ಹೆಚ್ಚುವರಿಯಾಗಿ ಕಾಯ್ದಿರಿಸಬೇಕು. ಈ ಕುರಿತು ಹೆಚ್.ಆರ್.ಎಂ.ಎಸ್ ತಂತ್ರಾಂಶದಿಂದ ಮಾಹಿತಿ ಪಡೆದುಕೊಳ್ಳಬೇಕು. ಚುನಾವಣೆ ಕಾರ್ಯಕ್ಕೆ ನಿಯುಕ್ತಿಗೊಂಡ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಬೇಕು. ಯಾವುದೇ ಸಿಬ್ಬಂದಿ ಮತದಾನ ಪ್ರಕ್ರಿಯೆಯಿಂದ ಹೊರ ಉಳಿಯಬಾರದು ಎಂದು ನಿರ್ವಹಣಾ ಸಮಿತಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಶುರುವಾಯ್ತು ಟಿಕೇಟ್ ಅಂದರ್-ಬಾಹರ್ ಆಟ

ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಚುನಾವಣೆ ಪ್ರಚಾರ ಕಾರ್ಯಕ್ಕೆ ನಿಗದಿ ಪಡಿಸಿದ ಸ್ಥಳಗಳನ್ನು ಗುರುತಿಸಿ, ಅಧಿಸೂಚನೆ ಹೊರಡಿಸಬೇಕು. ಚುನಾವಣೆ ಪ್ರಚಾರದ ಫ್ಲಕ್ಸ್, ಹೋರ್ಡಿಂಗ್ಸ್, ಬಂಟಿಂಗ್ಸ್‍ಗಳನ್ನು ಎಲ್ಲೆಂದರಲ್ಲಿ ಹಾಕಲು ಅನುಮತಿ ನೀಡದೆ ಇವುಗಳನ್ನು ನಿಗಧಿ ಮಾಡಿದ ಸ್ಥಳಗಳಲ್ಲಿ ಪ್ರದರ್ಶಿಸಲು ಅವಕಾಶ ನೀಡಬೇಕು. ಈ ಸ್ಥಳಗಳ ಬಾಡಿಗೆ ನಿಗಧಿಪಡಿಸಿ ಪರವಾನಿಗೆ ನೀಡಬೇಕು. ಯಾವುದೇ ಧಾರ್ಮಿಕ ಕೇಂದ್ರಗಳು, ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಕಟ್ಟಡಗಗಳಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಅನುಮತಿ ನೀಡಬಾರದು. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಇದರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಕಳೆದ ಚುನಾವಣೆಗಳಲ್ಲಿ ಜಿಲ್ಲೆಯ ಗ್ರಾಮೀಣ ಭಾಗಗಳಿಗಿಂತಲೂ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ. ರಾಜ್ಯದ ಸರಾಸರಿ ಮತದಾನ ಪ್ರಮಾಣಕ್ಕಿಂತಲೂ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಜಿ.ಪಂ ಸಿಇಓ ನೇತೃತ್ವದ ಜಿಲ್ಲಾ ಸ್ವೀಪ್ ಸಮಿತಿ ನಗರ ಪ್ರದೇಶಗಳಲ್ಲಿ ಹೆಚ್ಚು ಮತದಾನದ ಜಾಗೃತಿ ಮೂಡಿಸಬೇಕು. ಈಗಾಗಲೇ ಸ್ವೀಪ್ ಸಮಿತಿ ಚುಟುವಟಿಕೆಗಳಿಗೆ ಬಿಡುಗಡೆಯಾದ ರೂ.11 ಲಕ್ಷ ಹಣವನ್ನು ಸ್ವೀಪ್ ಸಮಿತಿ ಅಧ್ಯಕ್ಷರಿಗೆ ವರ್ಗಾಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಇದನ್ನೂ ಓದಿ: ರಾಜವೀರ ಮದಕರಿ ನಾಯಕ ಸಿನಿಮಾ | ನಟ ದರ್ಶನ್ ಹೇಳಿದ್ದೇನು

ಸಭೆಯಲ್ಲಿ ಜಿ.ಪಂ ಸಿಇಓ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDCDhamender Kumar MeenaLok Sabha ElectionsPolicePreparationSPಎಸ್ಪಿಚಿತ್ರದುರ್ಗಡಿಸಿಧಮೇಂದರ್ ಕುಮಾರ್ ಮೀನಾಪೊಲೀಸ್ಲೋಕಸಭೆ ಚುನಾವಣೆಸಿದ್ಧತೆ
Share This Article
Facebook Email Print
Previous Article arecanut price list ಅಡಕೆ ಧಾರಣೆ | 23 ಫೆಬ್ರವರಿ 2024 | ಶುಕ್ರವಾರ ಮಾರುಕಟ್ಟೆಯಲ್ಲಿ ಯಾವ ಅಡಿಕೆ ರೇಟ್ ಎಷ್ಟಿತ್ತು
Next Article ಜಿಲ್ಲಾಧಿಕಾರಿ ಕಚೇರಿಯ ಕೆ-ಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಾಮಾಜಿಕ ಮಾಧ್ಯಮ, ಸುಳ್ಳು, ಕಾಸಿಗಾಗಿ ಸುದ್ದಿಯ ಮೇಲೆ ನಿಗಾ ಇರಿಸಿ| ಜಿಲ್ಲಾಧಿಕಾರಿ ಟಿ.ವೆಂಕಟೇಶ್
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up