
ಚಿತ್ರದುರ್ಗ ನ್ಯೂಸ್.ಕಾಂ:
ಸರ್ಕಾರ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಉಚಿತವಾಗಿ ಅಕ್ಕಿ ನೀಡುತ್ತಿದೆ. ಆದರೆ, ಈ ಅಕ್ಕಿ ಅನ್ಯರ ಪಾಲಾಗುತ್ತಿರುವ ಉದಾಹರಣೆಗಳು ಹಲವು ಬಾರಿ ಸಿಕ್ಕಿವೆ.
ಇಂಥದ್ದೇ ಪ್ರಕರಣ ಚಿತ್ರದುರ್ಗದ ಕೆಳಗೋಟೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯರು ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಮಾಲು ಸಮೇತ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೊಲೆರೊ ಪಿಕಪ್ ವಾಹನವೊಂದರಲ್ಲಿ ನ್ಯಾಯಬೆಲೆ ಅಂಗಡಿಯಿಂದ ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ ಹತ್ತು ಚೀಲ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಅಕ್ಕಿ ಅನ್ನಭಾಗ್ಯಕ್ಕೆ ಸಂಬಂಧಿಸಿದ್ದು, ಎಂದು ಆಹಾರ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ.
ಇದನ್ನೂ ಓದಿ: ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ | ಸ್ಥಳದಲ್ಲೇ ಇಬ್ಬರ ದುರ್ಮರಣ
ಅಕ್ರಮವಾಗಿ ಅಕ್ಕಿ ಮಾರಾಟ ಮಾಡದ ನ್ಯಾಯಬೆಲೆ ಅಂಗಡಿಯವರಿಗೂ ಸ್ಥಳೀಯರು ತರಾಟೆಗೆ ತೆಗೆದುಕೊಂಡಿರುವ ವೀಡಿಯೋ ಹರಿದಾಡುತ್ತಿದೆ.
ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ಕಿ ಸಾಗಿಸುತ್ತಿದ್ದ ಆರೋಪದಲ್ಲಿ ದಾದಾಪೀರ್ ಹಾಗೂ ಷರೀಫ್ ಎಂಬುವವರ ವಿರುದ್ಧ ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
