CHITRADURGA NEWS | 10 MARCH 2025
ಚಿತ್ರದುರ್ಗ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ರೂ.170/-ರಂತೆ ಡಿಬಿಟಿ ಮುಖಾಂತರ ಹಣ ಪಾವತಿಸಲಾಗುತ್ತಿತ್ತು.
ಆದರೆ, ಫೆಬ್ರವರಿ-2025ರಿಂದ ಪ್ರತಿ ಸದಸ್ಯರಿಗೆ ರೂ.170 ಹಣದ ಬದಲಾಗಿ 5 ಕೆ.ಜಿ. ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರ್ಚ್ ತಿಂಗಳ ಆಹಾರಧಾನ್ಯ ಬಿಡುಗಡೆಯಾಗಿದ್ದು ಹಾಗೂ ಫೆಬ್ರವರಿ-2025ರ ಆಹಾರ ಧಾನ್ಯ ಸೇರಿ ಈ ತಿಂಗಳು ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 15 ಕೆ.ಜಿ.ಅಕ್ಕಿ ವಿತರಿಸಲಾಗುತ್ತದೆ.
ಅಂತ್ಯೋದಯ ಎಎವೈ ಪಡಿತರ ಚೀಟಿದಾರರಿಗೆ 01 ರಿಂದ 03 ಸದಸ್ಯರಿಗೆ 35 ಕೆ.ಜಿ.ಅಕ್ಕಿ, 04 ಸದಸ್ಯರಿಗೆ 45 ಕೆ.ಜಿ.ಅಕ್ಕಿ, 05 ಸದಸ್ಯರಿಗೆ 65 ಕೆ.ಜಿ.ಅಕ್ಕಿ, 06 ಸದಸ್ಯರಿಗೆ 85 ಕೆ.ಜಿ.ಅಕ್ಕಿ, 07 ಸದಸ್ಯರಿಗೆ 105 ಕೆ.ಜಿ.ಅಕ್ಕಿ, 08 ಸದಸ್ಯರಿಗೆ 125 ಕೆ.ಜಿ.ಅಕ್ಕಿ, 09 ಸದಸ್ಯರಿಗೆ 145 ಕೆ.ಜಿ.ಅಕ್ಕಿ ಹಾಗೂ 10 ಸದಸ್ಯರಿಗೆ 165 ಕೆ.ಜಿ ಅಕ್ಕಿ ಮುಂದುವರೆದು 10ಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿಗೆ ಇದೇ ಅನುಪಾತದಂತೆ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
