ಹೊಳಲ್ಕೆರೆ
teachers; ಸದೃಢ ಸಮಾಜ ಕಟ್ಟುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ |ಶಾಸಕ ಎಂ.ಚಂದ್ರಪ್ಪ
CHITRADURGA NEWS | 05 SEPTEMBER 2024
ಹೊಳಲ್ಕೆರೆ: ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದಿ ಸದೃಢ ಸಮಾಜ ಕಟ್ಟುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಶಿಕ್ಷಕರು(teachers)ಗಳಿಗೆ ಹೇಳಿದರು.
ಕ್ಲಿಕ್ ಮಾಡಿ ಓದಿ: Siridhanya : ಸಿರಿಧಾನ್ಯ ‘ಸಾವೆ’ಗೆ ದರ ನಿಗದಿಗೊಳಿಸಿ | ಜಿಲ್ಲಾಡಳಿತಕ್ಕೆ ಅನ್ನದಾತರ ಡೆಡ್ ಲೈನ್
ಪಟ್ಟಣದ ಸಂವಿಧಾನ ಸೌಧದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಶಾಖೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಮುಖ್ಯ ಶಿಕ್ಷಕರ ಸಂಘ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರು ಶಿಕ್ಷಕ ವೃತ್ತಿಯಿಂದ ರಾಷ್ಟ್ರಪತಿ ಹುದ್ದೆಗೇರಿದರು. ಅವರ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.
ನಿಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಂಡು ಶಾಲೆಗೆ ಬರುವ ಮಕ್ಕಳನ್ನು ನಿಮ್ಮ ಸ್ವಂತ ಮಕ್ಕಳಂತೆ ನೋಡಿಕೊಂಡು ಪಾಠ ಹೇಳಿಕೊಡಿ. ಮನೆಯಲ್ಲಿ ಮಕ್ಕಳ ಲಾಲನೆ ಪಾಲನೆ ಮಾಡುವ ತಾಯಿಯೇ ಮೊದಲ ಗುರು. ಪರಮ ಪವಿತ್ರವಾದ ಶಿಕ್ಷಕ ವೃತ್ತಿಗೆ ಚ್ಯುತಿ ಬರದಂತೆ ಕೆಲಸ ಮಾಡಿ ಎಂದು ಹೇಳಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಳನೆ ವೇತನ ಆಯೋಗಕ್ಕೆ ಒಪ್ಪಿಕೊಂಡಿದ್ದಾರೆ ಎಂದರು.
ಕ್ಲಿಕ್ ಮಾಡಿ ಓದಿ: Job Fair: ಉದ್ಯೋಗ ಮೇಳ 12ಕ್ಕೆ | ಬಹುರಾಷ್ಟ್ರೀಯ ಕಂಪನಿಗಳು ಭಾಗಿ
ಸಾರ್ವಜನಿಕರ ಬದುಕನ್ನು ಅರ್ಥಮಾಡಿಕೊಂಡು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಅದೇ ರೀತಿ ನಿಮಗೆ ಸಿಕ್ಕಿರುವ ಅವಕಾಶವನ್ನು ಸಾರ್ವಜನಿಕರಿಗೆ ಧಾರೆ ಎರೆಯಬೇಕೆಂದು ಎಂದು ತಿಳಿಸಿದರು.
ನಿವೃತ್ತ ಶಿಕ್ಷಕರು ಮತ್ತು ಉತ್ತಮ ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಬೀಬಿ ಫಾತಿಮ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಶ್ರೀನಿವಾಸ್, ಪುರಸಭೆ ಸದಸ್ಯರುಗಳಾದ ಪಿ.ಆರ್.ಮಲ್ಲಿಕಾರ್ಜುನ್, ಸುಧಾ ಬಸವರಾಜ್, ಬಿ.ಎಸ್.ರುದ್ರಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಲೋಕೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಶಿವಮೂರ್ತಿ, ಡಾ.ಹೆಚ್.ಜಿ.ಉಮಾಪತಿ, ಡಾ.ಹೆಚ್.ಬಿ.ಮಂಜುನಾಥ್, ಬಿ.ಬಸಪ್ಪ, ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯರುಗಳು, ನಿವೃತ್ತ ಶಿಕ್ಷಕರುಗಳು ಹಾಗೂ ತಾಲ್ಲೂಕಿನ ಎಲ್ಲಾ ಶಿಕ್ಷಕರುಗಳು ಭಾಗವಹಿಸಿದ್ದರು.