CHITRADURGA NEWS | 01 July 2025
ರಕ್ತದಲ್ಲಿನ ಸಕ್ಕರೆಮಟ್ಟ ಹೆಚ್ಚಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಹಾಗಾಗಿ ಮಧುಮೇಹ ರೋಗಿಗಳು ಹಣ್ಣುಗಳನ್ನು ತಿನ್ನುವ ಮೊದಲು ಹಲವು ಬಾರಿ ಯೋಚಿಸಬೇಕಾಗುತ್ತದೆ. ಯಾಕೆಂದರೆ ಹಣ್ಣಿನಲ್ಲಿ ಸಕ್ಕರೆಯಂಶ ಹೆಚ್ಚಾಗಿದ್ದು, ಮಧುಮೇಹಗಳು ಅಂತಹ ಹಣ್ಣುಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆಮಟ್ಟ ಹೆಚ್ಚಾಗುತ್ತದೆ.
ಆದರೆ, ಕೆಲವು ಹಣ್ಣುಗಳನ್ನು ತಿನ್ನುವುದರಿಂದ ಮಧುಮೇಹದಲ್ಲಿ ರಕ್ತದಲ್ಲಿನ ಸಕ್ಕರೆ ಹೆಚ್ಚಾಗುವುದಿಲ್ಲ. ಆದರೆ ಈ ಹಣ್ಣಿನ ಬೀಜಗಳನ್ನು ತಿನ್ನುವುದರಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆಯಂತೆ. ಹಾಗಾದ್ರೆ ಆ ಬೀಜ ಯಾವುದು? ಮತ್ತು ಅದು ಹೇಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳೋಣ.
ಮಧುಮೇಹಕ್ಕೆ ಮಾವಿನ ಬೀಜ ಪ್ರಯೋಜನಕಾರಿ
ಮಾವಿನ ಹಣ್ಣಿನ ಬೀಜಗಳನ್ನು ತಿನ್ನುವುದರಿಂದ ನಿಮ್ಮ ಗ್ಲೂಕೋಸ್ ಹೀರಿಕೊಳ್ಳುವಿಕೆ ಕಡಿಮೆಯಾಗುತ್ತದೆ ಮತ್ತು ಮಧುಮೇಹವನ್ನು ನಿರ್ವಹಿಸಲು ಸಹ ಸಹಾಯ ಮಾಡುತ್ತದೆಯಂತೆ. ಅನೇಕ ಜನರು ಮಾವಿನ ಬೀಜಗಳ ಪುಡಿಯನ್ನು ತಯಾರಿಸಿ ತಿನ್ನುತ್ತಾರೆ. ಮಾವಿನ ಬೀಜದ ಪುಡಿಯನ್ನು ತಿನ್ನುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡುವುದರಿಂದ ಹಿಡಿದು ತೂಕ ಇಳಿಸುವವರೆಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ.
ತಜ್ಞರ ಪ್ರಕಾರ, ಮಧುಮೇಹದಿಂದ ಬಳಲುತ್ತಿದ್ದವರು, ಮಾವಿನ ಬೀಜಗಳನ್ನು ನಿಯಮಿತವಾಗಿ ಸೇವಿಸಿ. ಅದು ಮಧುಮೇಹವನ್ನು ನಿಯಂತ್ರಿಸಲು ಬಹಳಷ್ಟು ಸಹಾಯ ಮಾಡುತ್ತದೆ. ಯಾಕೆಂದರೆ ಮಾವಿನ ಬೀಜಗಳಲ್ಲಿ ಉತ್ತಮ ಪ್ರಮಾಣದ ಫೈಬರ್ ಕಂಡುಬರುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಲ್ಲದೇ ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡುತ್ತದೆ.
ಮಾವಿನ ಬೀಜಗಳನ್ನು ತಿನ್ನುವುದರಿಂದಾಗುವ ಇತರ ಪ್ರಯೋಜನಗಳು
ಮಾವಿನ ಬೀಜಗಳನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ. ಇದನ್ನು ತಿನ್ನುವುದರಿಂದ ಗ್ಯಾಸ್, ಅಜೀರ್ಣ ಮತ್ತು ವಾಯು ಸಮಸ್ಯೆ ಕಡಿಮೆಯಾಗುತ್ತದೆ. ಇದನ್ನು ತಿನ್ನುವುದರಿಂದ ನಿಮ್ಮ ಚರ್ಮವು ಆರೋಗ್ಯಕರವಾಗಿರುತ್ತದೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಡಿಮೆಯಾಗುತ್ತವೆ.
ಮಾವಿನ ಬೀಜಗಳನ್ನು ತಿನ್ನುವುದು ಕೂದಲಿಗೆ ತುಂಬಾ ಪ್ರಯೋಜನಕಾರಿ. ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ನೀವು ಇದನ್ನು ತಿನ್ನಬಹುದು.
ಮಾವಿನ ಬೀಜಗಳನ್ನು ಹೆಚ್ಚು ತಿನ್ನುವುದರಿಂದಾಗುವ ಅನಾನುಕೂಲಗಳು
ಮಾವಿನ ಬೀಜವನ್ನು ಅತಿಯಾಗಿ ತಿನ್ನುವುದರಿಂದ ಚರ್ಮದ ಮೇಲೆ ದದ್ದುಗಳು ಉಂಟಾಗಬಹುದು ಮತ್ತು ಚರ್ಮಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳು ಉಂಟಾಗಬಹುದು. ಇದನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುವುದರಿಂದ ಕೆಲವೊಮ್ಮೆ ಅಲರ್ಜಿ ಉಂಟಾಗಬಹುದು.
ಕೆಲವು ಸಂದರ್ಭಗಳಲ್ಲಿ, ಮಾವಿನ ಬೀಜಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುವುದರಿಂದ ಹೊಟ್ಟೆ ಕಿರಿಕಿರಿ ಮತ್ತು ಅತಿಸಾರದಂತಹ ಸಮಸ್ಯೆಗಳು ಉಂಟಾಗಬಹುದು. ಇದನ್ನು ಅತಿಯಾಗಿ ತಿನ್ನುವುದರಿಂದ ಕೆಲವೊಮ್ಮೆ ಆಮ್ಲೀಯತೆ ಉಂಟಾಗಬಹುದು ಹಾಗೂ ವಾಂತಿ ಮತ್ತು ವಾಕರಿಕೆ ಮುಂತಾದ ಸಮಸ್ಯೆಗಳು ಉಂಟಾಗಬಹುದು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
