
CHITRADURGA NEWS | 21 OCTOBER 2025
ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕಾಗಿ ಬಾಲಕನೊಬ್ಬನನ್ನು ಅಮಾನುಷವಾಗಿ ಶಿಕ್ಷಕನೊಬ್ಬ ಥಳಿಸಿರುವ ಘಟನೆ ಜಿಲ್ಲೆಯಲ್ಲಿ ಭಾರೀ ಆಕ್ರೋಶ ಸೃಷ್ಟಿಸಿದೆ.
ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದಿಂದ ನಡೆಯುತ್ತಿರುವ ವೀರಶೈವ ಆಗಮ ವೇದ ಸಂಸ್ಕೃತ ಪಾಠ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ವಿವಿ ಸಾಗರಕ್ಕೆ ಭರ್ಜರಿ ಒಳಹರಿವು | ಮೈದುಂಬಲಿದೆ ಕೋಡಿಯ ಹರಿವು
ಶಾಲೆಯ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಎಳೆಯ ಬಾಲಕನ ಜೊತೆಗೆ ಅಮಾನವೀಯವಾಗಿ ವರ್ತಿಸಿರುವ ವೀಡಿಯೋ ವೈರಲ್ ಆಗಿದ್ದು, ವೀಡಿಯೋ ನೋಡಿದ ತಕ್ಷಣ ನಾಯಕನಹಟ್ಟಿ ಪಟ್ಟಣದ ಸಾಕಷ್ಟು ಜನ ದೇವಸ್ಥಾನದ ಬಳಿ ಹೋಗಿ ಆಡಳಿತ ಮಂಡಳಿ ಹಾಗೂ ಶಿಕ್ಷಕನ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ.
ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಅಡಿಯಲ್ಲೇ, ಅಲ್ಲಿನ ದಾಸೋಹ ಭವನದ ಮೇಲ್ಭಾಗದಲ್ಲಿ ಈ ವೇದ ಆಗಮ ಪಾಠ ಶಾಲೆ ನಡೆಯುತ್ತಿದ್ದು, ಸಾಕಷ್ಟು ಮಕ್ಕಳು ಕಲಿಯುತ್ತಿದ್ದಾರೆ.
ಇದನ್ನೂ ಓದಿ: ಮಳೆಯ ಅಬ್ಬರ | ರೈತರನ್ನು ಚಿತ್ ಮಾಡಿದ ಚಿತ್ತಾ ಮಳೆ
ಇಂತಹ ಹಿನ್ನೆಲೆ ಇರುವ ಶಾಲೆಯಲ್ಲಿ ಶಿಕ್ಷಕ ದರ್ಪ ಮೆರೆದಿದ್ದು, ಬಾಲಕನ ಮೇಲೆ ಕ್ರೌರ್ಯ ಮೆರೆದಿದ್ದಾನೆ. ಈ ವೀಡಿಯೋ ವೈರಲ್ ಆಗುತ್ತಲೇ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಶಿಕ್ಷಕ ವೀರೇಶ್ ಹಿರೇಮಠ ನಾಪತ್ತೆಯಾಗಿದ್ದ.
ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ವೀರೇಶ್ ಹಿರೇಮಠ ಅವರನ್ನು ಗುಲಬರ್ಗಾದಲ್ಲಿ ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
