CHITRADURGA NEWS | 17 MARCH 2026
ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಶ್ರೀ ಹರಿಹರೇಶ್ವರ ಸ್ವಾಮಿ ದೇವಸ್ಥಾನದ ಬಾಗಿಲಿಗೆ ಬೆಂಕಿ ಹಚ್ಚಿ, ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗೆ ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2023 ಡಿಸೆಂಬರ್ 26 ರಂದು ಹೊಸದುರ್ಗ ತಾಲೂಕಿನ ಕಾರೇಹಳ್ಳಿ ಗ್ರಾಮದ ಸಮೀಪದ ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ನುಗ್ಗಿದ ಆರೋಪಿ ಕಡೂರು ತಾಲೂಕು ಸಿಂಗಟಗೆರೆಯ ಖಲಂದರ್ ಸಾವೆಲ್ ಹುಂಡಿ ಕಳವು ಮಾಡಲು ಯತ್ನಿಸಿದ್ದ. ಹುಂಡಿ ಕಳವು ಮಾಡಲು ಸಾಧ್ಯವಾಗದಿದ್ದಾಗ, ದೇವಸ್ಥಾನದ ಮುಖ್ಯ ದ್ವಾರದ ಮರದ ಬಾಗಿಲಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಸುಮಾರು 50 ಸಾವಿರ ರೂ. ಮೌಲ್ಯದ ಬಾಗಿಲಿಗೆ ಹಾನಿಯಾಗಿತ್ತು.
ಇದನ್ನೂ ಓದಿ: ಅಪರ ಸರ್ಕಾರಿ ವಕೀಲರ ಹುದ್ದೆ | ವಕೀಲರಿಂದ ಅರ್ಜಿ ಅಹ್ವಾನ
ದೇವಸ್ಥಾನದ ಟ್ರಸ್ಟ್ ಹಾಗೂ ಗ್ರಾಮಸ್ಥರು ಶ್ರೀರಾಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಬ್ ಇನ್ಸ್ಪೆಕ್ಟರ್ ಮಧು ಬಿ.ವಿ. ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರೋಣಾ ವಾಸುದೇವ್ ಅವರು ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ 7 ವರ್ಷ ಸಾದಾ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 17 | ಹತ್ತಿ ರೇಟ್ ಎಷ್ಟಿದೆ?
ದಂಡದ ಹಣದಲ್ಲಿ 40 ಸಾವಿರ ರೂ.ಗಳನ್ನು ದೇವಸ್ಥಾನಕ್ಕೆ ಪರಿಹಾರವಾಗಿ ನೀಡಲು ಮತ್ತು ಉಳಿದ 10,000 ರೂ.ಗಳನ್ನು ಸರ್ಕಾರಕ್ಕೆ ಜಮೆ ಮಾಡಲು ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕರಾದ ಎಸ್.ಎಸ್.ಮಲ್ಲಯ್ಯ ವಾದ ಮಂಡಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

