CHITRADURGA NEWS | 28 JULY 2024
ಚಿತ್ರದುರ್ಗ: ಪೊರಕೆ ಕಡ್ಡಿ ವ್ಯಾಪಾರಿ ಮನೆಯಲ್ಲಿ ಕಳ್ಳರು ಬರೋಬ್ಬರಿ ₹15 ಲಕ್ಷ ಹಾಗೂ ಒಡವೆ ದೋಚಿದ ಘಟನೆ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಸಮೀಪದ ಸೈಯದ್ ಸಾಬ್ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ನಗದು ಹಾಗೂ ಒಡವೆಗಳನ್ನು ಕಳವು ಮಾಡಿದ್ದಾರೆ.ಗ್ರಾಮದಲ್ಲಿ ಪೊರಕೆ ಕಡ್ಡಿ ವ್ಯಾಪಾರ ಮಾಡಿಕೊಂಡಿದ್ದ ಮಹಮ್ಮದ್ ಮುನ್ನಾಸಿರ್ ಅವರು ಕುಟುಂಬ ಸಮೇತ ಎರಡು ದಿನಗಳ ಹಿಂದೆ ಸಂಬಂಧಿಕರ ಮದುವೆಗೆಂದು ಬೆಂಗಳೂರಿಗೆ ಹೋಗಿದ್ದರು.
ಇದನ್ನೂ ಓದಿ: ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಭೇಟಿ | ತಾಯಿ ಲೀಲಾವತಿ ಹೆಸರಿನಲ್ಲಿ ಆರ್ಥಿಕ ನೆರವು
ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು ಮನೆಯ ಹಿಂಬದಿಯ ಗೇಟ್ ಹಾಗೂ ಬಾಗಿಲನ್ನು ಮುರಿದು ಒಳ ನುಗ್ಗಿ ₹ 15 ಲಕ್ಷ ನಗದು ಹಾಗೂ ₹ 2 ಲಕ್ಷ ಬೆಲೆ ಬಾಳುವ ಒಡವೆಗಳನ್ನು ದೋಚಿ ಪರಾರಿಯಾಗಿದ್ದಾರೆ.
ಮನೆಯಲ್ಲಿದ್ದ ಸಿಸಿ ಟಿವಿ ಕ್ಯಾಮೆರಾ ಒಡೆದುಹಾಕಿ ಅದಕ್ಕೆ ಸಂಬಂಧಿಸಿದ ಡಿವಿಆರ್ ಅನ್ನು ಸಹ ಕಳ್ಳರು ಕದ್ದೊಯ್ದಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
