CHITRADURGA NEWS | 20 APRIL 2024
ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯ ಪಂಡರಹಳ್ಳಿ ಲೈನ್ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೋಟ್ ಕಂಡಕ್ಟರ್ ಬಳಸಿ ಹಾಲಿ ಇರುವ 66 ಕೆವಿ ಡಿ.ಸಿ ಲೈನ್‍ನಿಂದ ಮಲ್ಟಿ ಸಕ್ರ್ಯುಟ್ ಟವರ್ ನಿರ್ಮಾಣ ಮಾಡಲು ಏಪ್ರಿಲ್ 21 ಮತ್ತು 22 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಹೊಳಲ್ಕೆರೆ ಬಳಿ ಕಣಿವೆ ಬಳಿ ಕಾರು ಪಲ್ಟಿ | ಚಾಲಕ ಸ್ಥಳದಲ್ಲೇ ಸಾವು
ಅನ್ನೇಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೊಡಬನಾಳ್, ಸೊಂಡೆಕೊಳ, ಸಿಂಗಾಪುರ, ಕಕ್ಕೇಹರವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಡಚಣೆಯಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

