
CHITRADURGA NEWS | 24 AUGUST 2026
ಚಿತ್ರದುರ್ಗ: ಪ್ರತಿಭೆಯ ಹಿಂದೆ ತಂದೆ-ತಾಯಿಗಳು ಹಾಗೂ ಗುರು-ಹಿರಿಯರ ಪರಿಶ್ರಮವಿದೆ. ವಿದ್ಯೆ ಎನ್ನುವುದು ತಪಸ್ಸಿದ್ದಂತೆ. ವಿದ್ಯಾರ್ಥಿ ದೆಸೆಯಲ್ಲಿ ಕಷ್ಟಪಟ್ಟು ಓದಿದರೆ ಭವಿಷ್ಯದಲ್ಲಿ ಸುಖವಾಗಿ ಬದುಕಬಹುದು ಎಂದು ನಿವೃತ್ತ ಪ್ರಾಂಶುಪಾಲ ಬಿ.ಸಿ.ಶಾಂತರಾಜ್ ಹೇಳಿದರು.
ಇದನ್ನೂ ಓದಿ: ಶ್ರಾವಣಮಾಸದ ಪ್ರಯುಕ್ತ ಮುರುಘಾಮಠದಲ್ಲಿ ವಚನಾಭಿಷೇಕ | ಶ್ರೀ ಸಾವಳಗಿ ಗುರುಶಾಂತ ಸ್ವಾಮಿಗಳವರ ಸ್ಮರಣೆ
ನಗರದ ನೀಲಕಂಠೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಕುಂಚಿಗ ವೀರಶೈವ ಲಿಂಗಾಯಿತ ಸಮಾಜ ಹಾಗೂ ಉತ್ಥಾನ ಟ್ರಸ್ಟ್ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯೆಗಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ. ಶಿಕ್ಷಣದ ಜೊತೆಗೆ ಕೃಷಿಯ ಮಹತ್ವವನ್ನೂ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಪದವಿ ಪಡೆದ ಬಳಿಕ ಕೃಷಿಗೂ ನಮಗೂ ಸಂಬಂಧವಿಲ್ಲ ಎಂಬ ಮನೋಭಾವ ಸರಿಯಲ್ಲ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವುದರಿಂದ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ದೊರೆಯುತ್ತದೆ ಎಂದರು.
ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ವಿಷಾದನೀಯ. ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಸೇರಿದಂತೆ ಅನೇಕ ಸಾಧಕರು ಕಷ್ಟಪಟ್ಟು ಓದಿ ಜೀವನದಲ್ಲಿ ಸಾಧನೆ ಮಾಡಿದ್ದಾರೆ. ಇಂದಿನ ವಿದ್ಯಾರ್ಥಿಗಳು ಅಂತಹ ಸಾಧಕರ ಹಾದಿಯಲ್ಲಿ ಸಾಗಬೇಕು. ಪ್ರತಿಕ್ಷಣವೂ ಅಮೂಲ್ಯವಾಗಿದ್ದು, ಮೊಬೈಲ್‌ನಲ್ಲಿ ಸಮಯ ವ್ಯರ್ಥ ಮಾಡುವ ಬದಲು ಓದಿನ ಕಡೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಡಾ.ಹೇಮಂತರಾಜು ಅವರ ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆ
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಸರ್ಕಾರಿ ಉದ್ಯೋಗವನ್ನೇ ಅವಲಂಬಿಸದೆ ಸ್ವಂತ ಉದ್ಯಮದ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಕಲಿಯಬೇಕು. ಸಮಾಜದ ಸಂಘಟನೆ ಹಾಗೂ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ನಿರ್ದೇಶಕ ಎಲ್.ಬಿ. ರಾಜಶೇಖರಪ್ಪ ಮಾತನಾಡಿ, ಕಳೆದ 15 ವರ್ಷಗಳಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಸಮಾಜದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು. ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡುವ ಮೂಲಕ ಸಮಾಜದ ಉನ್ನತಿಗೆ ಶ್ರಮಿಸಬೇಕು. ಸಮಾಜ ಉದ್ಧಾರವಾದರೆ ದೇಶವೂ ಉದ್ಧಾರವಾದಂತೆ ಎಂದರು.
ಸಮಾಜದ ಕಾರ್ಯದರ್ಶಿ ಹೆಚ್. ಕುಬೇರಪ್ಪ ದಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಡಳಿತ ಮಂಡಳಿ ಖಜಾಂಚಿ ಕೆ.ಹೆಚ್. ಮುರುಗೇಶಗೌಡ್ರು, ನಿವೃತ್ತ ಡಿವೈಎಸ್ಪಿ ಎಸ್. ಬಸವರಾಜಪ್ಪ, ಯು. ಪಾರ್ವತಮ್ಮ, ಆಡನೂರು ಸ್ವಾಮಿ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಇದನ್ನೂ ಓದಿ: ಪೌರ ಕಾರ್ಮಿಕರ ನೋವು ಅರ್ಥಮಾಡಿಕೊಂಡಿದ್ದೇನೆ | ಪಿ.ರಘು
ದಗ್ಗೆ ಶಿವಪ್ರಕಾಶ್, ಎನ್.ಎಸ್. ಲವಕುಮಾರ್ ಹಾಗೂ ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಪದಾಧಿಕಾರಿಗಳು, ಸದಸ್ಯರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

