CHITRADURGA NEWS | 18 AUGUST 2026
ಚಿತ್ರದುರ್ಗ: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ. ರಘುಮೂರ್ತಿ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ವಂದೇ ಮಾತರಂ ಗೀತೆಗೆ ಅವಮಾನ ಆರೋಪ | ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ
ಬೆಂಗಳೂರಿನ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಮಾತನಾಡಿದ ಸಚಿವ ರಘುಮೂರ್ತಿ ಅವರು, ಇಲಾಖೆಯಲ್ಲಿ ಈಗಾಗಲೇ ಕೈಗೊಂಡಿರುವ ಎಲ್ಲ ಯೋಜನೆಗಳ ಅನುಷ್ಠಾನದ ಸಮಗ್ರ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಾವ ಯೋಜನೆಗಳು ಯಾವ ಹಂತದಲ್ಲಿದೆ? ಬಾಕಿ ಇರುವ ಕಾಮಗಾರಿಗಳು ಯಾವುವು ಹಾಗೂ ಅವುಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳೇನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.
ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ | ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳು ನೇರವಾಗಿ ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗೆ ಸಂಬಂಧಿಸಿರುವುದರಿಂದ ಅವುಗಳ ಅನುಷ್ಠಾನದಲ್ಲಿ ವಿಳಂಬವಾಗಬಾರದು ಎಂಬುದನ್ನು ಸಚಿವರು ಸಭೆಯಲ್ಲಿ ಸ್ಪಷ್ಟಪಡಿಸಿದರು.
ಬಾಕಿ ಇರುವ ಯೋಜನೆಗಳನ್ನು ಗುರುತಿಸಿ, ಅವುಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಶೇಷವಾಗಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು ಶಿಕ್ಷಣ, ವಸತಿ, ಆರ್ಥಿಕ ಸಬಲೀಕರಣ, ಮೂಲಸೌಕರ್ಯ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿರುವುದರಿಂದ ಅವುಗಳ ಅನುಷ್ಠಾನದಲ್ಲಿ ಸಮನ್ವಯ ಮತ್ತು ವೇಗ ಅಗತ್ಯಎಂದು ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಘಂಟಿ, ಇಲಾಖೆಯ ನಿರ್ದೇಶಕ ಅಶೋಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

