CHITRADURGA NEWS | 15 JUNE 2026
ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ಇನ್ನು ಬಲವಾಗಬೇಕು. ಅಶಿಸ್ತಿಗೆ ಇಲ್ಲಿ ಜಾಗವಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಮುರುಳಿಧರ ಹಾಲಪ್ಪ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಜೂ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪದಗ್ರಹಣ ಸಮಾರಂಭಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಪಕ್ಷದಿಂದ ಕರೆದಿರುವ ಪೂರ್ವಭಾವಿ ಸಭೆಗೆ ಬಾರದವರಲ್ಲಿ ಜವಾಬ್ದಾರಿಯಿಲ್ಲ ಎಂದರ್ಥವಾಗುತ್ತದೆ. ಸಹಸ್ರಾರು ಮಂದಿ ಪಕ್ಷದಲ್ಲಿ ಜವಾಬ್ದಾರಿ ಹೊರಲು ಸಿದ್ದರಿದ್ದಾರೆ. ಇಪ್ಪತ್ತು ದಿನಗಳ ಹಿಂದೆ ಕೆಪಿಸಿಸಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಗೆ ಗೈರಾದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಯನ್ನು ಹುದ್ದೆಯಿಂದ ತೆಗೆದು ಹಾಕಲಾಯಿತು.
ಮುಂಬರುವ ಎಲ್ಲಾ ಚುನಾವಣೆಯಲ್ಲೂ ಪಕ್ಷದ ಗೆಲುವಿಗೆ ಕಾರ್ಯಕರ್ತರು ಸಿದ್ದರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‍ಗೆ ಭರವಸೆ ನೀಡಬೇಕಿದೆ ಎಂದರು.
ಇದನ್ನೂ ಓದಿ: ಶಾಲೆಗೆ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ
ಕೇಂದ್ರ ಚುನಾವಣಾ ಆಯೋಗ ಮತದಾರರ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಮುಂದಾಗಿರುವುದನ್ನು ಕಾರ್ಯಕರ್ತರು ಲಘುವಾಗಿ ತೆಗೆದುಕೊಳ್ಳಬಾರದು. ಅರ್ಹ ಮತದಾರರು ಮತ ಪಟ್ಟಿಯಿಂದ ಹೊರ ಹೋಗದಂತೆ ಎಚ್ಚರ ವಹಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ನಿಮ್ಮ ನಿಮ್ಮ ಬ್ಲಾಕ್, ಬೂತ್ ಮಟ್ಟಗಳಲ್ಲಿ ಗಟ್ಟಿಯಾಗಿ ನಿಲ್ಲಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ಸಂಘಟನಾ ಚತುರ ಅನೇಕ ರಾಜ್ಯಗಳ ಉಸ್ತುವಾರಿಯಾಗಿದ್ದ ಬಿ.ಕೆ.ಹರಿಪ್ರಸಾದ್ ಅವರನ್ನು ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿರುವುದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದೆ. ಜೂ.21 ರಂದು ಅವರ ಪದಗ್ರಹಣ ಸಮಾರಂಭದಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಪಾಲ್ಗೊಳ್ಳಬೇಕು. ಪಕ್ಷಕ್ಕೆ ದುಡಿದ ಎಲ್ಲರಿಗೂ ಸ್ಥಾನಮಾನಗಳು ಸಿಗುತ್ತದೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷವನ್ನು ಗೆಲ್ಲಿಸಬೇಕು ಎಂದರು.
ಆದಿಜಾಂಬವ ಅಭಿವೃದ್ದಿ ನಿಮಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ, ಎಸ್‍ಐಆರ್ ಬಗ್ಗೆ ಮೊದಲು ಜಿಲ್ಲೆಯ ಎಲ್ಲಾ ಶಾಸಕರು ತಿಳಿದುಕೊಂಡು ಕಾರ್ಯಕರ್ತರಲ್ಲಿ ಜಾಗೃತಿ ಮೂಡಿಸಬೇಕು. ಬಿಜೆಪಿ, ಆರೆಸ್ಸೆಸ್ಸ್‌ನವರು ಕಾಂಗ್ರೆಸ್ ಶಾಸಕರುಗಳನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಮೂಲಕ ಕಾಂಗ್ರೆಸ್ ಮತಗಳನ್ನು ಪಟ್ಟಿಯಿಂದ ಡಿಲಿಟ್ ಮಾಡಲು ಹೊರಟಿದ್ದಾರೆ. ಈಗಾಗಲೆ ಪಶ್ಚಿಮ ಬಂಗಾಳ, ಬಿಹಾರದಲ್ಲಿ ಲಕ್ಷಾಂತರ ಮತಗಳು ಪಟ್ಟಿಯಿಂದ ಹೊರತೆಗೆಯಲಾಗಿದೆ. ಎಸ್‍ಐಆರ್ ಅನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಸಲಹೆ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
ಜಿಲ್ಲೆಯ ಎಲ್ಲಾ ಶಾಸಕರು ಜವಾಬ್ದಾರಿ ವಹಿಸಿಕೊಂಡರೆ ಬಿ.ಕೆ.ಹರಿಪ್ರಸಾದ್ ಅವರ ಪದಗ್ರಹಣಕ್ಕೆ ಜಿಲ್ಲೆಯಿಂದ ಲಕ್ಷಾಂತರ ಕಾರ್ಯಕರ್ತರು ಬೇಕಾದರೂ ಭಾಗವಹಿಸುತ್ತಾರೆ. ಕೇಂದ್ರ ಚುನಾವಣಾ ಆಯೋಗದ ಮೂಲಕ ಎಸ್‍ಐಆರ್.ಗೆ ಬಿಜೆಪಿ, ಆರೆಸ್ಸೆಸ್ಸ್ ಕೈಹಾಕಿದೆ. ಇದರ ವಿರುದ್ದ ಪ್ರತಿಯೊಬ್ಬರು ಜಾಗೃತರಾಗಿರಬೇಕೆಂದು ಮನವಿ ಮಾಡಿದರು.
ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಮಾತನಾಡಿ, ಜೂ.21 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಬಿ.ಕೆ.ಹರಿಪ್ರಸಾದ್ ಅವರಿಗೆ ವಿರೋಧಿಗಳ ಟೀಕೆಗೆ ಉತ್ತರ ಕೊಡುವ ಧೈರ್ಯವಿದೆ. ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದರೆ ಒಂದೊಂದು ಕ್ಷೇತ್ರದಿಂದ ಎರಡು ಸಾವಿರ ಮಂದಿಯಾದರೂ ಪಾಲ್ಗೊಳ್ಳಬಹುದು. ಅದಕ್ಕೆ ಬೇಕಾದ ವಾಹನಗಳ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು.
ಕೆಪಿಸಿಸಿ ಉಪಾಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ, ಪಕ್ಷದ ಮುಖಂಡರು, ಕಾರ್ಯಕರ್ತರು ಬಿ.ಕೆ.ಹರಿಪ್ರಸಾದ್‍ರವರ ಪದಗ್ರಹಣ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳಬೇಕು. ಕಾರ್ಯಕರ್ತರಲ್ಲಿ ಹುರುಪು ಮೂಡಿದೆ. ಐವತ್ತು ವರ್ಷಗಳಿಂದಲೂ ಪಕ್ಷ ಕಟ್ಟುವ ಕೆಲಸದಲ್ಲಿ ತೊಡಗಿರುವ ಡಿ.ಕೆ.ಶಿವಕುಮಾರ್ ಹೋರಾಟವನ್ನು ಗುರುತಿಸಿ ಪಕ್ಷದ ವರಿಷ್ಟರು ಮುಖ್ಯಮಂತ್ರಿಯನ್ನಾಗಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಕೈಬಿಡಲ್ಲ ಎಂದರು.
ಇದನ್ನೂ ಓದಿ: ಸ್ವಯಂಕೃತ ಅಪರಾಧದಿಂದ ಚುನಾವಣೆ ಸೋತಿದ್ದೇನೆ | ಎಚ್.ಆಂಜನೇಯ
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕುಶಲಕರ್ಮಿ ವಿಭಾಗದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ, ಮಾಜಿ ಎಂಎಲ್‍ಸಿ ಜಯಮ್ಮ ಬಾಲರಾಜ್, ಕಾಂಗ್ರೆಸ್ ಮುಖಂಡರಾದ ಕೆ.ಎಂ.ಹಾಲಸ್ವಾಮಿ, ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಸೈಯದ್ ಖುದ್ದೂಸ್, ಮಂಜುನಾಥ್, ಡಿ.ಸುದರ್ಶನ್, ದಿ.ಡಿ.ಸುಧಾಕರ್ ಪುತ್ರ ಸುಹಾಸ್ ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
