CHITRADURGA NEWS | 16 MARCH 2024
ಚಿತ್ರದುರ್ಗ: ಪೊಲೀಸರ ಸೋಗಿನಲ್ಲಿ ಬಂದ ಇಬ್ಬರು ಕಳ್ಳರು ಬೆಳ್ಳಂ ಬೆಳಗ್ಗೆ ನಗರದ ಚಳ್ಳಕೆರೆ ರಸ್ತೆಯಲ್ಲಿ ಮಹಿಳೆಯೊಬ್ಬರಿಗೆ ವಂಚಿಸಿ ಪರಾರಿಯಾಗಿದ್ದಾರೆ.
ಚಳ್ಳಕೆರೆ ರಸ್ತೆಯ ದಿಶಾ ಡಾಬಾ ಸಮೀಪದಲ್ಲಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ, ಪೊಲೀಸರಂತೆ ಬಂದ ಕಳ್ಳರು ಸುಮಂಗಲಾ ಎಂಬ ಮಹಿಳೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನೇ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಇದನ್ನೂ ಓದಿ: ವಾರದೊಳಗೆ ಬೆಳೆವಿಮೆ ಪಾವತಿ | ರೈತರಿಗೆ ಜಿಲ್ಲಾಧಿಕಾರಿ ಭರವಸೆ
ಪೊಲೀಸರೆಂಬಂತೆ ನಂಬಿಸಿ, ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಬಿಚ್ಚಿ ಬ್ಯಾಗಿನಲ್ಲಿ ಇಟ್ಟುಕೊಳ್ಳಿ, ಮುಂದೆ ಕಳ್ಳರಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಈ ವೇಳೆ ಸುಮಂಗಲಾ ಅವರು ಮಾಂಗಲ್ಯ ಸರವನ್ನು ಬಿಚ್ಚಿ ಕವರಿನಲ್ಲಿಟ್ಟು ಬ್ಯಾಗಿಗೆ ಹಾಕಿಕೊಳ್ಳುವಾಗ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಅಂದಾಜು 1.80 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಕಳ್ಳತನ ಮಾಡಲಾಗಿದೆ.
ಇದನ್ನೂ ಓದಿ: ಬೋರ್‍ವೆಲ್ ಕೊರೆಯಲು ಏಕರೂಪ ದರ ನಿಗಧಿ
ಚಿತ್ರದುರ್ಗದಲ್ಲಿರುವ ಮಗಳ ಮನೆಗೆ ಬರಲು ಬಸ್ ಇಳಿಯುತ್ತಿದ್ದಂತೆ ಈ ಘಟನೆ ನಡೆದಿದೆ.
ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ತಾವರೆ ಹೂ ಮುಡಿದು ಸಂಸತ್ ಪ್ರವೇಶಿಸುತ್ತೇನೆ | ಗಾಯತ್ರಿ ಸಿದ್ದೇಶ್ವರ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
