
CHITRADURGA NEWS | 11 JANUARY 2026
ಚಳ್ಳಕೆರೆ: ತಳಕು ಗ್ರಾಮದ ಬಸ್ ನಿಲ್ದಾಣದ ಸಮೀಪವಿರುವ ಮೂರು ಅಂಗಡಿಗಳ ಶಟರ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದ್ದು, ಒಂದು ಅಂಗಡಿಯಲ್ಲಿದ್ದ ನಗದು ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಸರಕುಗಳನ್ನು ಕಳ್ಳರು ದೋಚಿದ್ದಾರೆ.
ಇದನ್ನೂ ಓದಿ: ಮತ್ತೊಂದು ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಸಾವು | ಕೊಲ್ಲಾಪುರ Dysp ಪ್ರಯಾಣಿಸುತ್ತಿದ್ದ ಕಾರು

ಗುರುವಾರ ರಾತ್ರಿ (ಜ.09) 10 ಗಂಟೆಯಿಂದ ಶುಕ್ರವಾರ ಬೆಳಗಿನ ಜಾವದ ನಡುವೆ ಈ ಘಟನೆ ಸಂಭವಿಸಿದೆ.
ತಳಕು ಬಸ್ ನಿಲ್ದಾಣದ ಬಳಿಯಿರುವ ಸ್ನೇಹಜೀವಿ ಪ್ರಾವಿಷನ್ ಸ್ಟೋರ್ ಅಂಗಡಿಯ ಶಟರ್‌ಗೆ ಹಾಕಿದ್ದ ಬೀಗವನ್ನು ಕಬ್ಬಿನದ ಆಯುಧದಿಂದ ಮುರಿದ ಕಳ್ಳರು, ಒಳನುಗ್ಗಿ ಡ್ರಾಯರ್‌ನಲ್ಲಿದ್ದ ರೂ. 5 ಸಾವಿರ ನಗದು ಹಣ ಹಾಗೂ ಸುಮಾರು ರೂ.13 ಸಾವಿರ ಮೌಲ್ಯದ ಗುಟ್ಕಾ ಪಾಕೆಟ್ ಬ್ಯಾಗ್‌ಗಳನ್ನು ಕಳವು ಮಾಡಿದ್ದಾರೆ.
ಒಟ್ಟು ರೂ.18 ಸಾವಿರ ಮೌಲ್ಯದ ಸೊತ್ತು ಕಳ್ಳತನವಾಗಿದೆ ಎಂದು ಅಂಗಡಿ ಮಾಲೀಕ ನಜರವಯ್ಯ ದೂರಿನಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ಕಳ್ಳರು ಪಕ್ಕದಲ್ಲಿಯೇ ಇರುವ ಶ್ರೀ ಶಿವಸಂಕಲ್ಪ ಎಲೆಕ್ಟ್ರಿಕಲ್ಸ್ ಹಾಗೂ ಶ್ರೀ ಸಿಗಂಧೂರೇಶ್ವರಿ ಫರ್ಟಿಲೈಸರ್ಸ್ ಅಂಗಡಿಗಳ ಶಟರ್ ಬೀಗವನ್ನು ಮುರಿದು ಒಳನುಗ್ಗಿದ್ದಾರೆ.
ಇದನ್ನೂ ಓದಿ: ಹಿರಿಯೂರು ಬಳಿ ಭೀಕರ ಅಪಘಾತ | ನಾಲ್ವರು ಯುವಕರು ಮೃತ | ಕಾರು – ಲಾರಿ ನಡುವೆ ಡಿಕ್ಕಿ
ಆದರೆ ಈ ಅಂಗಡಿಗಳಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳು ಅಥವಾ ಹಣ ದೊರೆಯದ ಕಾರಣ ಕಳ್ಳತನವಾಗಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ತಳಕು ಠಾಣೆಯ ಎಎಸ್ ಐ ಮಂಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
