CHITRADURGA NEWS | 10 JULY 2024
ಚಿತ್ರದುರ್ಗ: ತಿಥಿ ಕಾರ್ಯಕ್ಕೆ ಕುಟುಂಬ ಸಮೇತ ತೆರಳಿದ್ದ ವೇಳೆ ಕಳ್ಳರು ಕೈಚಳಕ ತೋರಿದ ಘಟನೆ ಹಿರಿಯೂರು ನಗರದ ಅವದಾನಿ ಬಡಾವಣೆಯಲ್ಲಿ ನಡೆದಿದೆ.
ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮದ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಶಿಕಲಾ ಅವರು ಸಂಬಂಧಿಕರೊಬ್ಬರ ಮನೆಯಲ್ಲಿನ ತಿಥಿ ಕಾರ್ಯಕ್ಕೆ ಕುಟುಂಬ ಸಮೇತ ತೆರಳಿ ಕೊಳ್ಳೇಗಾಲಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ದುಷ್ಕರ್ಮಿಗಳು ಮನೆ ಬೀಗ ಮುರಿದ ₹ 24.30 ಲಕ್ಷ ಮೌಲ್ಯದ ಒಡವೆ ಹಾಗೂ ₹ 25,000 ನಗದು ದೋಚಿಕೊಂಡು ಹೋಗಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಡಿವೈಎಸ್ಪಿ ಚೈತ್ರಾ, ಇನ್ಸ್ಪೆಕ್ಟರ್ ರಾಘವೇಂದ್ರ ಕಾಂಡಕಿ, ಎಸ್ಐ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
