ಮುಖ್ಯ ಸುದ್ದಿ
Mysuru; ಮುಂದಿನ ವರ್ಷ ಮೈಸೂರಿನಲ್ಲಿ ನರ್ಸಿಂಗ್ ಕಾಲೇಜು ಆರಂಭಕ್ಕೆ ಚಿಂತನೆ | ಎಂ.ಸಿ.ರಘುಚಂದನ್
CHITRADURGA NEWS | 08 OCTOBER 2024
ಚಿತ್ರದುರ್ಗ: ಮುಂದಿನ ವರ್ಷದಿಂದ ಮೈಸೂರಿ(Mysuru)ನಲ್ಲಿ ನರ್ಸಿಂಗ್ ಕಾಲೇಜು(College of Nursing) ಆರಂಭಿಸುವ ಚಿಂತನೆಯಿದೆ ಎಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹೇಳಿದರು.
ಕ್ಲಿಕ್ ಮಾಡಿ ಓದಿ: Arecanut Rate: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಎಸ್.ಎಲ್.ವಿ.ಕಾಲೇಜ್ ಆಫ್ ನರ್ಸಿಂಗ್ ಮತ್ತು ವೆಂಕಟೇಶ್ವರ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
25 ವರ್ಷಗಳ ಹಿಂದೆ ನರ್ಸಿಂಗ್ ಕಾಲೇಜು ಆರಂಭಗೊಂಡಾಗ ಕೇರಳದ ಹೆಚ್ಚು ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿ ಶಿಕ್ಷಣ ಪಡೆದು ಈಗ ಅಮೇರಿಕಾ, ಲಂಡನ್, ಆಸ್ಟ್ರೇಲಿಯಾ, ದುಬೈ, ಅರಬ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಈ ವರ್ಷ ನರ್ಸಿಂಗ್ ಕಾಲೇಜಿಗೆ ದಾಖಲಾಗಿರುವ ನೀವುಗಳು ಶಿಕ್ಷಣದ ಕಡೆ ಗಮನ ಕೊಟ್ಟು ಚೆನ್ನಾಗಿ ಓದಿ ನಮ್ಮ ಸಂಸ್ಥೆಗೆ ಕೀರ್ತಿ ತರಬೇಕು.
ಆರೋಗ್ಯದಲ್ಲಿ ಏನಾದರೂ ಏರುಪೇರಾದಾಗ ಆಸ್ಪತ್ರೆಗೆ ಬರುವವರಿಗೆ ಮಾನವೀಯತೆಯಿಂದ ಚಿಕಿತ್ಸೆ ನೀಡಿ ಅಮೂಲ್ಯವಾದ ಪ್ರಾಣ ಉಳಿಸುವ ಮಹತ್ತರ ಜವಾಬ್ದಾರಿ ನಿಮ್ಮ ಮೇಲಿದೆ. ಹಾಗಾಗಿ ನರ್ಸಿಂಗ್ ಶಿಕ್ಷಣಕ್ಕೆ ಪ್ರವೇಶ ಪಡೆದಿರುವ ನಿಮ್ಮಗಳ ಗುರಿ ಶಿಕ್ಷಣದ ಕಡೆಯಿರಬೇಕು ಎಂದರು.
ಕ್ಲಿಕ್ ಮಾಡಿ ಓದಿ: Chitradurga jail: ಜೈಲಿನಲ್ಲಿ ಮುರುಘಾ ಶರಣರು ಓದಿದ ಪುಸ್ತಕಗಳು ಎಷ್ಟು ಗೊತ್ತಾ ?
ಎಸ್.ಎಲ್.ವಿ. ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಎಂ.ಮಹಾಂತೇಶ್, ಪ್ರಕೃತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಎಸ್.ಬಿ.ನವಾಜ್ ಅಹಮದ್, ಆದ್ಯಾ ಕಾಲೇಜ್ ಆಫ್ ಫಾರ್ಮಸಿ ಪ್ರಾಚಾರ್ಯ ಡಾ.ಪಾಲಾಕ್ಷ, ಎಸ್.ಎಲ್.ವಿ. ಪಿ.ಯು. ಕಾಲೇಜಿನ ಪ್ರಾಂಶುಪಾಲ ಕೇಶವಮೂರ್ತಿ ಯು, ಇಂಡಿಯನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಮುಖ್ಯೋಪಾಧ್ಯಾ ಆರ್.ಸಿ. ತಿಪ್ಪೇಸ್ವಾಮಿ ಇದ್ದರು.