CHITRADURGA NEWS | 22 November 2026
ಹೊಳಲ್ಕೆರೆ: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಮೂರು ಕರಡಿಗಳು ದಾಳಿ ನಡೆಸಿದ್ದು, ರೈತನ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ: NPS – OPS ವಿಚಾರದಲ್ಲಿ ಸೂಕ್ತ ನಿರ್ಧಾರ | ಹಬ್ಬಕ್ಕೆ ಮುಂಗಡ 50 ಸಾವಿರ | ಡಿ.ಕೆ.ಶಿವಕುಮಾರ್
ಹೊಳಲ್ಕೆರೆ ತಾಲ್ಲೂಕಿನ ಹಿರೇಎಮ್ಮಿಗನೂರು ಗ್ರಾಮದ ರೈತ ಪ್ರಕಾಶ್ ಕರಡಿ ದಾಳಿಯಿಂದ ಗಾಯಗೊಂಡಿರುವ ರೈತ.
ಎಂದಿನಂತೆ ತೋಟದ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ಪ್ರಕಾಶ್ ಮೇಲೆ ಇದ್ದಕ್ಕಿದ್ದಂತೆ ಮೂರು ಕರಡಿಗಳು ಮುಗಿಬಿದ್ದಿವೆ. ಕರಡಿಗಳ ದಾಳಿಯ ತೀವ್ರತೆಗೆ ರೈತನ ತಲೆಯ ಭಾಗಕ್ಕೆ ಗಂಭೀರ ಪೆಟ್ಟಾಗಿದೆ. ಪ್ರಾಣಾಪಾಯದಿಂದ ಪಾರಾಗಲು ರೈತ ನಡೆಸಿದ ಹೋರಾಟದ ನಡುವೆಯೂ ತೀವ್ರ ರಕ್ತಸ್ರಾವದಿಂದ ಅವರು ಕುಸಿದು ಬಿದ್ದಿದ್ದಾರೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಮತ್ತು ಕುಟುಂಬಸ್ಥರು, ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶ್ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್ 21 | ಯಾವ ಅಡಿಕೆಗೆ ಎಷ್ಟು ರೇಟು
ಕರಡಿ ಕಾಟಕ್ಕೆ ಗ್ರಾಮಸ್ಥರ ಆಕ್ರೋಶ:
ಕಳೆದ ಹಲವು ವರ್ಷಗಳಿಂದ ಈ ಭಾಗದ ಅಡಕೆ ಹಾಗೂ ಇತರ ತೋಟಗಳಲ್ಲಿ ಕರಡಿಗಳ ಹಿಂಡು ನಿರಂತರವಾಗಿ ಕಾಣಿಸಿಕೊಳ್ಳುತ್ತಿವೆ. ಕರಡಿಗಳು ಬೆಳೆಗಳನ್ನು ನಾಶಪಡಿಸುತ್ತಿರುವ ಬಗ್ಗೆ ಸ್ಥಳೀಯ ರೈತರು ಈಗಾಗಲೇ ಹಲವು ಬಾರಿ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಕರಡಿಗಳ ಉಪಟಳ ನಿಯಂತ್ರಿಸಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

