Connect with us

    Lok Adalath: ಮುನಿಸು ಮರೆತು ನ್ಯಾಯಾಲಯದಲ್ಲಿ ಒಂದಾದ ದಂಪತಿ

    Lok adalath

    ಮುಖ್ಯ ಸುದ್ದಿ

    Lok Adalath: ಮುನಿಸು ಮರೆತು ನ್ಯಾಯಾಲಯದಲ್ಲಿ ಒಂದಾದ ದಂಪತಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 14 DECEMBER 2024

    ಚಿತ್ರದುರ್ಗ: ವೈವಾಹಿಕ ಜೀವನದಲ್ಲಿ ಉಂಟಾಗಿದ್ದ ಕಹಿಯಿಂದ ಬೇಸತ್ತು ದೂರವಾಗಿದ್ದ ದಂಪತಿಗಳು ಇಂದು ನ್ಯಾಯಾಲಯದಲ್ಲಿ ಸಿಹಿ ತಿನ್ನಿಸುತ್ತಾ ಒಂದಾಗಿದ್ದಾರೆ.

    ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಮೂವರು ದಂಪತಿಗಳು ರಾಜಿ ಸಂಧಾನದ ಮೂಲಕ ಒಂದಾದ ಅಪರೂಪದ ಪ್ರಸಂಗ ನಡೆಯಿತು.

    ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್

    ಚಿತ್ರದುರ್ಗದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ನ್ಯಾಯಾಲಯದಲ್ಲಿ ಒಂದು ಪ್ರಕರಣ ಮತ್ತು ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿನ ಎರಡು ಪ್ರಕರಣದ ಮಾಹಿತಿ ಪಡೆದ ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಅವರು ಆ ಜೋಡಿಗಳೊಂದಿಗೆ ಮಾತನಾಡಿ ಮಕ್ಕಳ ಭವಿಷ್ಯ, ಬದುಕಿನ ಕುರಿತು ಮನವರಿಕೆ ಮಾಡಿ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಹೋಗುವಂತೆ ಸಲಹೆ ನೀಡಿದರು. ಈ ಮೂಲಕ ವೈವಾಹಿಕ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಸುಖಾಂತ್ಯಗೊಳಿಸಿದರು.

    ಇದನ್ನೂ ಓದಿ: ಒಂಟಿ ಮಹಿಳೆ ಮೇಲೆ ಅಟ್ಯಾಕ್ | ಚಿನ್ನದ ಸರ ಕಿತ್ತುಕೊಂಡು ಪರಾರಿ | ಮಹಿಳೆಯ ತಲೆಗೆ ರಾಡ್‍ನಿಂದ ಹಲ್ಲೆ

    ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಅವರ ಸಮ್ಮುಖದಲ್ಲಿ ಸೊಂಡೆಕೊಳ ಗ್ರಾಮದ ಕರುಣಾಸಾಗರ್ ಹಾಗೂ ಲತಾ ದಂಪತಿ, ಹಿರಿಯೂರು ನಗರದ ಮಹಾಲಿಂಗರಾಜು ಹಾಗೂ ಪ್ರತಿಭಾ ದಂಪತಿ, ಚಿಕ್ಕಂದವಾಡಿ ಗ್ರಾಮದ ಸ್ವಾಮಿ ಹಾಗೂ ಪ್ರತಿಭಾ ಅವರು ಮುನಿಸು ಮರೆತು ಪರಸ್ಪರ ಹೂ ಮಾಲೆ ಬದಲಿಸಿಕೊಂಡು, ಸಿಹಿ ತಿನ್ನಿಸುವ ಮೂಲಕ ಮತ್ತೆ ಜತೆಯಾಗಿ ಬದುಕು ಕಟ್ಟಿಕೊಳ್ಳುವ ಸಂಕಲ್ಪ ಮಾಡಿದರು.

    ಈ ವೇಳೆ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ, ವೈವಾಹಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯದಲ್ಲಿ 3 ಪ್ರಕರಣ ಹಾಗೂ ಜಿಲ್ಲೆ ವಿವಿಧ ನ್ಯಾಯಾಲಯಗಳಿಂದ 7 ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಕ್ರಮವಹಿಸಲಾಗಿದ್ದು, ಇದಕ್ಕೆ ಕಕ್ಷಿದಾರರು, ವಕೀಲರ ಸಂಘದವರು ಸಹ ಹೆಚ್ಚಿನ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

    ಇದನ್ನೂ ಓದಿ: ನಿರುದ್ಯೋಗಿಗಳಿಗೆ ಕುರಿ ಸಾಕಾಣಿಕೆ ತರಬೇತಿ | ಅರ್ಜಿ ಅಹ್ವಾನ

    ಈ ಬಾರಿಯ ಲೋಕ್ ಅದಾಲತ್ ನಲ್ಲಿ ಸುಮಾರು 4 ಸಾವಿರಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥ ಪಡಿಸುವ ಗುರಿ ಹೊಂದಲಾಗಿದ್ದು, ಕಳೆದ ಬಾರಿಯ ಲೋಕ್ ಅದಾಲತ್ ಗಿಂತಲೂ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಇತ್ಯರ್ಥವಾಗಲಿದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಡಿ.ಮಮತ, ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರ, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಸೇರಿದಂತೆ ಲೋಕ್ ಅದಾಲತ್ ನಲ್ಲಿ ವಕೀಲರು, ಸಾರ್ವಜನಿಕರು ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top