CHITRADURGA NEWS | 09 AUGUST 2026
ಚಿತ್ರದುರ್ಗ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ವರ್ಗದ ಆಸಕ್ತ ರೈತರಿಗೆ ಸಾವಯವ ಪದ್ಧತಿಯಡಿ ಸುಸ್ಥಿರ ಸಮಗ್ರ ಕೃಷಿ ಚಟುವಟಿಕೆಗಳ ಕುರಿತು ಮೂರು ದಿನಗಳ ಉಚಿತ ವಸತಿಯುಕ್ತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ: ಸಮಗ್ರ ಕೃಷಿ ಪದ್ಧತಿಯಿಂದ ವರ್ಷವಿಡೀ ನಿರಂತರ ಆದಾಯ | ರಜನೀಕಾಂತ
ಆಗಸ್ಟ್ 12ರಿಂದ 14ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂನಲ್ಲಿ ತರಬೇತಿ ನಡೆಯಲಿದೆ. ಮೊದಲ ದಿನ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕ ಇಂದೂಧರ ಅವರು ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅಳವಡಿಸಬಹುದಾದ ಸುಸ್ಥಿರ ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಗಳ ಕುರಿತು ಮಾಹಿತಿ ನೀಡಲಿದ್ದಾರೆ. ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಹನುಮಂತನಾಯ್ಕ ಅವರು ಎರೆಗೊಬ್ಬರ, ಕಾಂಪೋಸ್ಟ್ ತಯಾರಿಕೆ ಹಾಗೂ ಜೇನು ಕೃಷಿ ಕುರಿತು ತರಬೇತಿ ನೀಡಲಿದ್ದಾರೆ.
ಎರಡನೇ ದಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್. ರಜನಿಕಾಂತ ಅವರು ನಿರಂತರ ಹಾಗೂ ಸುಸ್ಥಿರ ಇಳುವರಿ ಪಡೆಯಲು ಅನುಸರಿಸಬೇಕಾದ ಸಮಗ್ರ ಕೃಷಿ ಪದ್ಧತಿಗಳು ಮತ್ತು ಪರ್ಯಾಯ ಬೆಳೆಗಳ ಕುರಿತು ಮಾಹಿತಿ ನೀಡಲಿದ್ದಾರೆ. ಹಿರಿಯೂರಿನ ಮುಖ್ಯ ಪಶುವೈದ್ಯಾಧಿಕಾರಿ ಡಾ. ನಾಗರಾಜ್ ಅವರು ಲಾಭದಾಯಕ ಹೈನುಗಾರಿಕೆ ಹಾಗೂ ಕುರಿ-ಮೇಕೆ ಸಾಕಾಣಿಕೆಯ ತಾಂತ್ರಿಕತೆಗಳ ಕುರಿತು ವಿಷಯ ಮಂಡಿಸಲಿದ್ದಾರೆ.
ತರಬೇತಿಯ ಮೂರನೇ ದಿನ ತಿಪಟೂರಿನ ಅಕ್ಷಯ ಕಲ್ಪ ಸಾವಯವ ಸಮಗ್ರ ಕೃಷಿ ಪದ್ಧತಿಯ ಪ್ರಾತ್ಯಕ್ಷಿಕೆ ತಾಕಿಗೆ ಅಧ್ಯಯನ ಪ್ರವಾಸ ಆಯೋಜಿಸಲಾಗಿದೆ.
ಇದನ್ನೂ ಓದಿ: ಮಳೆ ಕೊರತೆ | ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ | ಬೆಳೆ ವಿಮೆಗೆ ಸೂಚನೆ
ತರಬೇತಿಗೆ ಚಿತ್ರದುರ್ಗ ಜಿಲ್ಲೆಯ 45 ಆಸಕ್ತ ರೈತರಿಗೆ ಮಾತ್ರ ಅವಕಾಶವಿದ್ದು, ಆಸಕ್ತರು ಆಗಸ್ಟ್ 11ರೊಳಗೆ 8277931058 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು. ತರಬೇತಿಯಲ್ಲಿ ಭಾಗವಹಿಸುವ ರೈತರು ಕಡ್ಡಾಯವಾಗಿ ಎಫ್‌ಐಡಿ ಅಥವಾ ಚುನಾವಣಾ ಗುರುತಿನ ಚೀಟಿ ತರಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್. ರಜನಿಕಾಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

