
CHITRADURGA NEWS | 23 JULY 2025
ಹೊಳಲ್ಕೆರೆ: ವಿದ್ಯುತ್ ತಂತಿ ತಗುಲಿ ಅಸ್ವಸ್ಥಗೊಂಡಿದ್ದ ಮೂವರು ಸಾವನ್ನಪ್ಪಿರುವ ಘಟನೆ, ಹೊಳಲ್ಕೆರೆ ತಾಲೂಕಿನ ಕಾಳಘಟ್ಟದಲ್ಲಿ ನಡೆದಿದೆ.
ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ನೂತನ ಸಿಇಓ ಆಗಿ ಡಾ.ಆಕಾಶ್ ನೇಮಕ
ದಾವಣಗೆರೆ ಮೂಲದ ಕಾರ್ಮಿಕ ನಜೀರ್ (30), ಫಾರೂಕ್ (30) ಹಾಗೂ ಹೊಳಲ್ಕೆರೆ ತಾಲೂಕಿನ ಗ್ಯಾರೇ ಹಳ್ಳಿಯ ಶ್ರೀನಿವಾಸ್ (35) ಮೃತ ದುರ್ದೈವಿಗಳು.
ಶ್ರೀನಿವಾಸ್ ತೋಟದಲ್ಲಿ ಅಡಕೆ ಶೇಡ್ ನಿರ್ಮಾಣ ವೇಳೆ ಈ ದುರಂತ ಸಂಭವಿಸಿದೆ.
ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ, ತೀವ್ರ ಅಸ್ವಸ್ಥಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ: ಸಿರಿಗೆರೆ ಮಠದಲ್ಲಿ ಆಗಸ್ಟ್ 10 ಮತ್ತು 11 ರಂದು ರಾಜ್ಯಮಟ್ಟದ ವೀರಗಾಸೆ ಸ್ಪರ್ಧೆ
ಚಿಕಿತ್ಸೆ ಫಲಕಾರಿಯಾಗದೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
