
CHITRADURGA NEWS | 5 MAY 2025
ಚಿತ್ರದುರ್ಗ: ರಾಜ್ಯದಲ್ಲಿ ಇನ್ನೂ ಪಾಕಿಸ್ಥಾನದ ಪ್ರಜೆಗಳು ವಾಸವಿದ್ದು, ಅವರನ್ನು ಕಳಿಸಿಕೊಡಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಬಿಜೆಪಿ ಚಿತ್ರದುರ್ಗ ಜಿಲ್ಲಾ ಘಟಕದಿಂದ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಚಿತ್ರದುರ್ಗ ಜಿಲ್ಲೆಯಲ್ಲೂ ಇನ್ನೂ ಪಾಕಿಸ್ಥಾನದ ಪ್ರಜೆಗಳಿರುವ ಬಗ್ಗೆ ಮಾಹಿತಿಗಳಿದ್ದು, ಜಿಲ್ಲಾಡಳಿತ ಎಚ್ಚೆತ್ತು ಹೊರಗೆ ಹಾಕುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.

ಇದನ್ನೂ ಓದಿ: ಮೇ.5 ರಿಂದ ಪರಿಶಿಷ್ಟ ಜಾತಿ ಸಮೀಕ್ಷೆ | ಸಮಸ್ಯೆ ಪರಿಹಾರಕ್ಕೆ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಸ್ಥಾಪನೆ
ಮನವಿಯಲ್ಲಿದ್ದ ಅಂಶಗಳನ್ನು ಪಾಯಿಂಟ್ಸ್ ರೂಪದಲ್ಲಿ ಓದಿ:
- ಏ.22 ರಂದು ನಡೆದ ಫಹಲ್ಗಾಮ್ ದಾಳಿಯಲ್ಲಿ ಉಗ್ರರ ಅಟ್ಟಹಾಸದಿಂದ 26 ಭಾರತೀಯ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಪಾಕಿಸ್ಥಾನದ ವಿರುದ್ಧ ಹಲವು ಕಠಿಣ ಕ್ರಮ ತೆಗೆದುಕೊಂಡಿದೆ. ದೇಶದಲ್ಲಿರುವ ಪಾಕ್ ಪ್ರಜೆಗಳನ್ನು ಅವರ ದೇಶಕ್ಕೆ ಕಳಿಸುವ ಕೆಲಸ ಮಾಡಲಾಗುತ್ತಿದೆ.
ಇದನ್ನೂ ಓದಿ: ಈಜಿದ ನಂತರ ನಿಮ್ಮ ಕಣ್ಣುಗಳು ಉರಿಯುತ್ತಿದ್ದರೆ ಈ ಸಲಹೆ ಪಾಲಿಸಿರಿ
- ದೇಶದಲ್ಲಿರುವ ಪಾಕ್ ಪ್ರಜೆಗಳನ್ನು ಅವರ ದೇಶಕ್ಕೆ ಕಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಮಾದರಿಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಇನ್ನೂ ಕೂಡಾ ಪಾಕ್ ಪ್ರಜೆಗಳು ನಮ್ಮ ದೇಶದಲ್ಲಿ ವಾಸವಿರುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು.
- ಫಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಪಾಕಿಸ್ಥಾನ ಪ್ರಾಯೋಜಿತ. ಇದನ್ನು ಭಾರತೀಯರೆಲ್ಲರೂ ಉಗ್ರವಾಗಿ ಖಂಡಿಸಿದ್ದಾರೆ. ರಾಜ್ಯ ಸರ್ಕಾರ ಕೂಡಾ ಇದಕ್ಕೆ ಸಾಥ್ ನೀಡಿ ಕಠಿಣ ಕ್ರಮ ತೆಗೆದುಕೊಂಡು ರಾಜ್ಯದಲ್ಲಿರುವ ಪಾಕ್ ಪ್ರಜೆಗಳನ್ನು ಹೊರಗೆ ಹಾಕಬೇಕು.
ಇದನ್ನೂ ಓದಿ: ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆಯೇ?
ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ, ಬಾಳೆಕಾಯಿ ರಾಮದಾಸ್, ಮುಖಂಡರಾದ ಡಾ.ಸಿದ್ಧಾರ್ಥ್ ಗುಂಡಾರ್ಪಿ, ಜಯಪಾಲಯ್ಯ, ವೆಂಕಟೇಶ್ ಯಾದವ್, ನಾಗರಾಜ್ ಬೇದ್ರೆ, ರಾಮರೆಡ್ಡಿ, ಶೈಲೇಶ್, ಜಿಂಕಲ್ ಬಸವರಾಜ್, ಯಶವಂತ್, ಕಿರಣ್ ಇತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
