
CHITRADURGA NEWS | 17 AUGUST 2024
ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಗುಡುಗು ಸಿಡಿಲು (thunder bolt) ಸಹಿತ ಮಳೆರಾಯ ಅಬ್ಬರಿಸಿದ್ದು, ಅವಘಡಗಳು ಮುಂದುವರೆದಿವೆ.
ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ 106 ಕುರಿಗಳು ಮೃತಪಟ್ಟಿವೆ. ಗ್ರಾಮದ ಆಂಜನೇಯ ಹಾಗೂ ಓಬಣ್ಣ ಎಂಬುವವರಿಗೆ ಕುರಿಗಳು ಸೇರಿವೆ.
ಕ್ಲಿಕ್ ಮಾಡಿ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಡಿಕ್ಕಿ | ವ್ಯಕ್ತಿ ಮೃತ

ಕುರಿ ಹಟ್ಟಿಯಲ್ಲಿ ರಾತ್ರಿ ಮಲಗಿದ್ದ ವೇಳೆ ಏಕಾಏಕಿ ಸಿಡಿಲು ಹೊಡೆದು ಸ್ಥಳದಲ್ಲೇ ಮೃತಪಟ್ಟಿವೆ. ಆಂಜನೇಯ ಅವರಿಗೆ ಸೇರಿದ 90 ಹಾಗೂ ಓಬಣ್ಣ ಅವರ 16 ಕುರಿ ಸೇರಿ ಒಟ್ಟು 106 ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಘಟನೆಯಿಂದ ಕುರಿಗಾಯಿಗಳು ಕಂಗಾಲಾಗಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ರೆಹಮಾನ್ ಪಾಷಾ ಹಾಗೂ ಪರಶುರಾಂಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
