
CHITRADURGA NEWS | 10 FEBRUARY 2026
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಾನ್ಯತೆ ನವೀಕರಣಕ್ಕೆ ಇದೇ ಫೆಬ್ರವರಿ 16ರ ವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ: ಅರೋಗ್ಯ ಇಲಾಖೆಯಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ | ಪ್ರತಿಜ್ಞಾವಿಧಿ ಸ್ವೀಕಾರ

ಪ್ರತಿ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳನ್ನು ನಡೆಸಲು ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆ ಪಡೆಯುವುದು ಕಡ್ಡಾಯವಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಮಾನ್ಯತೆ ನವೀಕರಿಸಲು 2026ರ ಫೆಬ್ರವರಿ 16 ರವರೆಗೆ ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ.
ಇದನ್ನೂ ಓದಿ: ಫೆ.11 ರಿಂದ ಕಬೀರಾನಂದ ಮಠದಲ್ಲಿ ಶಿವರಾತ್ರಿ ಮಹೋತ್ಸವ | ಶ್ರೀ ಶಿವಲಿಂಗಾನಂದ ಸ್ವಾಮೀಜಿ
ಚಿತ್ರದುರ್ಗ ತಾಲ್ಲೂಕಿನ ಅರ್ಹ ಶಾಲಾ ಆಡಳಿತ ಮಂಡಳಿಗಳು ನಿಗದಿತ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
