Connect with us

    ಭಕ್ತ ಸಾಗರದ ನಡುವೆ ಸಾಗಿತು ತಿಪ್ಪೇರುದ್ರಸ್ವಾಮಿ ತೇರು

    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ

    ಮುಖ್ಯ ಸುದ್ದಿ

    ಭಕ್ತ ಸಾಗರದ ನಡುವೆ ಸಾಗಿತು ತಿಪ್ಪೇರುದ್ರಸ್ವಾಮಿ ತೇರು

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 26 MARCH 2024

    ಚಿತ್ರದುರ್ಗ: ಬರದ ನಾಡಿನಲ್ಲಿ ಕೆರೆ ಕಟ್ಟಿಸಿ ಜೀವ ಸಂಕುಲ ರಕ್ಷಣೆ ಮಾಡುವ ಮೂಲಕ ಪವಾಡವನ್ನೇ ಸೃಷ್ಟಿಸಿದ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಶ್ರದ್ಧಾ, ಭಕ್ತಿ ಹಾಗೂ ವಿಜೃಂಭಣೆಯಿಂದ ಜರುಗಿತು.

    ಇದನ್ನೂ ಓದಿ: ಉದ್ಯಮಿ ನವರತನ್ ಮಲ್ ನಿಧನ

    ನಾಡಿನಾದ್ಯಂತ ಭೀಕರ ಬರ ಆವರಿಸಿದ್ದರೂ, ಹಟ್ಟಿ ತಿಪ್ಪೇರುದ್ರಸ್ವಾಮಿಯ ಮೇಲಿನ ಭಕ್ತಿಗೆ ಬರ ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಚಿತ್ತಾ ನಕ್ಷತ್ರದಲ್ಲಿ ಸ್ವಾಮಿಯ ಬೃಹತ್ ತೇರನ್ನು ಸಾವಿರಾರು ಭಕ್ತರು ಎಳೆದು ಪುನೀತರಾದರು.
    ಮಾಡಿದಷ್ಟು ನೀಡು ಭಿಕ್ಷೆ ಎಂಬ ತತ್ವ ಸಂದೇಶ ಸಾರಿ, ಬರದ ನಾಡಿನಲ್ಲಿ ಜಲ ಸಂರಕ್ಷಣೆಯ ಮಹತ್ವ ತಿಳಿಸಿದ ನಾಯಕನಹಟ್ಟಿಯ ಕಾಯಕಯೋಗಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವದ ಅಂಗವಾಗಿ ಹರಕೆ ಮಾಡಿಕೊಂಡಿದ್ದ ಭಕ್ತರು ದೊಡ್ಡ ಅಗ್ನಿ ಕುಂಡದಲ್ಲಿ ಒಣ ಕೊಬ್ಬರಿ ಸುಟ್ಟು ಭಕ್ತಿ ಸಮರ್ಪಿಸಿದರು.

    ಇದನ್ನೂ ಓದಿ: 61 ಲಕ್ಷ ರೂ. ಗಳಿಗೆ ಮುಕ್ತಿ ಭಾವುಟ ಹರಾಜು

    ಮಧ್ಯ ಕರ್ನಾಟಕದ ಐತಿಹಾಸಿಕ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತರು ಬೆಳಿಗ್ಗೆಯಿಂದಲೇ ಜಾತ್ರೆಗಾಗಿ ನಾಯಕನಹಟ್ಟಿಯತ್ತ ಮುಖ ಮಾಡಿದ್ದರು.

    ನಾಯಕನಹಟ್ಟಿ ಜಾತ್ರೆಯ ದೃಶ್ಯಾವಳಿಗಳನ್ನು ಇಲ್ಲಿ ಕಣ್ತುಂಬಿಕೊಳ್ಳಿ 

    ಗುರು ತಿಪ್ಪೇರುದ್ರಸ್ವಾಮಿಯ ಹೊರಮಠ ಹಾಗೂ ಒಳಮಠ ಎರಡೂ ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ಪೂಜಾ ಕಾರ್ಯಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

    ಇದನ್ನೂ ಓದಿ: 150 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಣೆ

    ಮಧ್ಯಾಹ್ನ 2 ಗಂಟೆಯಿಂದಲೇ ಒಳಮಠದಲ್ಲಿ ಮುಖ್ಯ ಅರ್ಚಕ ನೇತೃತ್ವದಲ್ಲಿ ಉತ್ಸವ ಮೂರ್ತಿ ಹೊತ್ತು ತರುವ ಪಲ್ಲಕ್ಕಿಯನ್ನು ಧಾರ್ಮಿಕ ವಿಧಿ ವಿಧಾನಗಳಿಂದ ಸಿಂಗರಿಸಲಾಯಿತು. ನಂತರ 2:45 ಸುಮಾರಿಗೆ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಇರಿಸಿ, ರಥೋತ್ಸವದ ಬಳಿ ತಂದು ಸಜ್ಜುಗೊಳಿಸಲಾಯಿತು.

    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ

    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ

    ಮಧ್ಯಾಹ್ನ 3.34ರ ಸುಮಾರಿಗೆ ಚಿತ್ತಾ ನಕ್ಷತ್ರದಲ್ಲಿ ಅಸಂಖ್ಯ ಭಕ್ತರು ತಿಪ್ಪೇರುದ್ರಸ್ವಾಮಿ ರಥವನ್ನು ರಥ ತೇರುಬೀದಿಯಿಂದ ಹೊರಮಠದವರೆಗೆ ಎಳೆಯುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.

    ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪಗೆ ಭರ್ಜರಿ ಸ್ವಾಗತ

    ರಥವು ತೇರು ಬೀದಿಯಿಂದ ಪಾದಗಟ್ಟೆಯವರೆಗೆ ಚಲಿಸುವಾಗ ಭಕ್ತರು ರಥಕ್ಕೆ ಬಾಳೆಹಣ್ಣು, ಕಾಳುಮೆಣಸು, ಧವನ, ಹೂವು, ಚೂರು ಬೆಲ್ಲವನ್ನು ಸಮರ್ಪಿಸಿ ತಮ್ಮ ಇಷ್ಠಾರ್ಥವನ್ನು ಈಡೇರಿಸುವಂತೆ ಭಕ್ತಿ ಪೂರ್ವಕವಾಗಿ ಪ್ರಾರ್ಥಿಸುತ್ತಾ ಶ್ರೀ ತಿಪ್ಪೇರುದ್ರಸ್ವಾಮಿಗೆ ಜಯವಾಗಲಿ, ‘ಕಾಯಕ ಯೋಗಿಗೆ ಜಯವಾಗಲಿ’ ತಿಪ್ಪೇರುದ್ರಸ್ವಾಮಿ ಮಹಾರಾಜ್ ಕಿ ಜೈ ಎನ್ನುವ ಜಯಘೋಷ ಕೂಗುತ್ತಾ ರಥದ ದೊಡ್ಡ ಗಾತ್ರದ ಮಣಿ ಹಗ್ಗ ಎಳೆದು ಧನ್ಯರಾದರು.ನಾಡಿನ ಸುಭೀಕ್ಷೆ ಹಾಗೂ ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥಿಸಿದರು.

    ಇದನ್ನೂ ಓದಿ: ನಾಗರೀಕರ ತುರ್ತು ಗಮನಕ್ಕೆ | ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ

    ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ದ್ರಾಕ್ಷರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ ಬಾಬು, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ತುಮಕೂರು, ಆಂದ್ರಪ್ರದೇಶದ ಲಕ್ಷಾಂತರ ಭಕ್ತರು ನೆರೆದಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top