
ಚಿತ್ರದುರ್ಗ ನ್ಯೂಸ್.ಕಾಂ: ನಗರದ ಹೊರಭಾಗದ ಜಗಳೂರು ಮಹಾಲಿಂಗಪ್ಪ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈಯರ್ ಸ್ಪೋಟವಾಗಿ, ಕಾರು ಪಲ್ಟಿಯಾಗಿ ಜಖಂ ಆಗಿದೆ. ಈ ಅಪಘಾತದಲ್ಲಿ ಐದು ಜನ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಕೆನ್ನೆಡಲು ಜನರಿಗೆ ಕೆಎಸ್ಸಾರ್ಟಿಸಿ ಬಸ್ ಮೇಲೆ ಕಡಲಿನಷ್ಟು ಪ್ರೀತಿ
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊನ್ನನಾಯಕನಹಳ್ಳಿ ಗ್ರಾಮದ ಬಿ.ಆರ್. ಬಸವರಾಜ್ ಕುಟುಂಬದವರು ಅ.24 ಮಂಗಳವಾರ ಬೆಳಗ್ಗೆ 10.45ರ ಸಮಯದಲ್ಲಿ ಪತ್ನಿ ಎಚ್.ಆರ್.ಗೀತಮ್ಮ, ಮಕ್ಕಳಾದ ರಾಜು, ಪೃಥ್ವಿ, ಮತ್ತು ತಂಗಿಯ ಮಗ ಗಗನ್ ಜೊತೆಗೆ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಬಸವರಾಜ್ ಅವರು ಕಾರು ಚಾಲನೆ ಮಾಡುತ್ತಿದ್ದರು. ಈ ವೇಳೆ ಟಯರ್ ಸ್ಪೋಟವಾಗಿದ್ದು ಐದು ಜನ ಗಾಯಗೊಂಡಿದ್ದಾರೆ. ಎಲ್ಲರನ್ನೂ ಶಿವಮೊಗ್ಗ ಸರ್ಜಿ ಸೂಪರ್ ಸ್ಪೆಪಾಲಿಟಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಚಿತ್ರದುರ್ಗ ಬಡಾವಣೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಆಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
