
CHITRADURGA NEWS | 04 MARCH 2024
ಹಿರಿಯೂರು : ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಹಿರಿಯೂರು ತಾಲೂಕಿನ ಕಳವಿಬಾಗಿ ಗೇಟ್ ಬಳಿ ನಡೆದಿದೆ.
ಕಾರಿನಲ್ಲಿ ಇದ್ದ ಐವರು ಚಳ್ಳಕೆರೆಯಿಂದ ಶಿರಾ ನಗರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ: ಕಾಮಗಾರಿಗೆ ಅಡ್ಡಿ ಮಾಡದಂತೆ ಅಬ್ಬಿನಹೊಳಲು ರೈತರಿಗೆ ಮನವಿ
ಕಾರು ಪಲ್ಟಿಯಾದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಐಮಂಗಲ ಪೊಲೀಸ್ ಠಾಣಾ ಪೊಲೀಸರು ಘಟನೆ ನೆಡದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
