CHITRADURGA NEWS | 29 September 2026
ಚಿತ್ರದುರ್ಗ: ಕರ್ನಾಟಕದ ವಿವಿಧ ಭಾಗಗಳ ಹಿಂದುಳಿದ ಹಾಗೂ ಪರಿಶಿಷ್ಟ ವರ್ಗಗಳನ್ನು ಪ್ರತಿನಿಧಿಸುವ 19 ಮಠಾಧೀಶರು ಮತ್ತು ಸ್ವಾಮೀಜಿಗಳು ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು.
ಇದನ್ನೂ ಓದಿ: ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
ಈ ಭೇಟಿಯು ಗುರುಪೀಠಗಳ ಆಧ್ಯಾತ್ಮಿಕ ನಾಯಕರನ್ನು ಒಂದೇ ಯಾತ್ರೆಯಲ್ಲಿ ಒಗ್ಗೂಡಿಸಿದ ಸಾಮಾಜಿಕ ಮತ್ತು ಆಧ್ಯಾತ್ಮಿಕವಾಗಿ ವಿಶೇಷ ಮಹತ್ವ ಪಡೆದುಕೊಂಡಿತು.
ಟಿಟಿಡಿ ಮಂಡಳಿ ಸದಸ್ಯರಾದ ಎಸ್.ನರೇಶ್ ಕುಮಾರ್ ಆಸಕ್ತಿವಹಿಸಿ ನೇತೃತ್ವ ತೆಗೆದುಕೊಂಡಿದ್ದು, ಪೀಠಾಧೀಶರಿಗೆ ಗೌರವಪೂರ್ಣ ದರ್ಶನ ವ್ಯವಸ್ಥೆ ಕಲ್ಪಿಸುವಂತೆ ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಅವರಿಗೆ ಮನವಿ ಮಾಡಿದ್ದರು. ಟಿಟಿಡಿ ನಿಯಮಾನುಸಾರ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸಲ್ಲಿಸಿದ್ದ ಮನವಿಗೆ ಆಡಳಿತದಿಂದ ಸಕಾರಾತ್ಮಕ ಸ್ಪಂದನೆ ದೊರೆತಿತ್ತು.
ಈ ಯಾತ್ರೆ ಸಾಧ್ಯವಾಗಲು ಟಿಟಿಡಿ ಅಧ್ಯಕ್ಷರಾದ ಬಿ.ಆರ್.ನಾಯ್ಡು ಅವರ ಸಹಕಾರವೇ ಪ್ರಮುಖ ಕಾರಣ. ವಿವಿಧ ಸಮುದಾಯಗಳ ಗುರುಪೀಠಾಧೀಶರ ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಯನ್ನು ಗೌರವಿಸಿ, ಅವರಿಗೆ ತಿರುಮಲ ದರ್ಶನಕ್ಕೆ ಅವಕಾಶ ಕಲ್ಪಿಸಿದ ಅವರಿಗೆ ನಾನು ಹೃತ್ಪೂರ್ವಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಆಡಳಿತ ಮಂಡಳಿ ಸದಸ್ಯರಾದ ಎಸ್.ನರೇಶ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಮುಧದ್ ರವಿಚಂದ್ರ ಹಾಗೂ ಅಧಿಕಾರಿಗಳು ದರ್ಶನದ ಸಮಯ, ಪ್ರವೇಶ ಹಾಗೂ ಇತರೆ ಅಗತ್ಯ ವ್ಯವಸ್ಥೆಗಳನ್ನು ಸಮನ್ವಯಗೊಳಿಸಿ, ಸ್ವಾಮೀಜಿಗಳ ದರ್ಶನ ಸುಗಮವಾಗಿ ನೆರವೇರಲು ಸಹಕರಿಸಿದರು.
ಯಾತ್ರೆಯಲ್ಲಿ ಭಾಗವಹಿಸಿದ ಗುರುಪೀಠಗಳು ಕೇವಲ ಧಾರ್ಮಿಕ ಕೇಂದ್ರಗಳಲ್ಲ, ಶಿಕ್ಷಣ ಮತ್ತು ಸಾಮಾಜಿಕ ಸಬಲೀಕರಣದಲ್ಲೂ ಮಹತ್ವದ ಪಾತ್ರ ವಹಿಸುತ್ತಿವೆ. ಇಂತಹ ಪೀಠಾಧೀಶರು ಒಂದಾಗಿ ತಿರುಮಲ ದರ್ಶನ ಪಡೆಯುವುದು ಆಧ್ಯಾತ್ಮಿಕ ಏಕತೆ ಮತ್ತು ಸಾಮಾಜಿಕ ಸಾಮರಸ್ಯದ ಸಂದೇಶ ನೀಡುತ್ತದೆ ಎಂದು ನರೇಶ್ ಕುಮಾರ್ ಹೇಳಿದರು.
ಇದನ್ನೂ ಓದಿ: ರಾಜ್ಯದ 69 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ್ ಜೋಡೋ ಯಾತ್ರೆ | ಬಿ.ಕೆ.ಹರಿಪ್ರಸಾದ್
ಯಾತ್ರೆಯ ನಿಯೋಗದಲ್ಲಿ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಶ್ರೀ ಕುಂಬಾರ ಗುಂಡಯ್ಯ ಸ್ವಾಮೀಜಿ, ಶ್ರೀ ಹಡಪದ ಅಪ್ಪಣ್ಣ ಸ್ವಾಮೀಜಿ, ಶ್ರೀ ದಯಾನಂದಪುರಿ ಸ್ವಾಮೀಜಿ, ಶ್ರೀ ಯಾದವಾನಂದ ಸ್ವಾಮೀಜಿ, ಶ್ರೀ ಶಿವಬಸವ ಸ್ವಾಮೀಜಿ, ಶ್ರೀ ಶಾಂತಲಿಂಗ ಸ್ವಾಮೀಜಿ, ಶ್ರೀ ಚೆನ್ನಬಸವ ಸ್ವಾಮೀಜಿ, ಶ್ರೀ ಮಹಾಲಿಂಗ ಸ್ವಾಮೀಜಿ, ಶ್ರೀ ಬಸವಪ್ರಸಾದ ಸ್ವಾಮೀಜಿ ಹಾಗೂ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

