CHITRADURGA NEWS | 01 APRIL 2025
ಬೇಸಿಗೆಯಲ್ಲಿ, ಚರ್ಮದ ಸಮಸ್ಯೆಗಳು ಹೆಚ್ಚು ಕಾಡುತ್ತವೆ. ಆದರೆ ಸೂರ್ಯನ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಇದಕ್ಕೆ ಕಣ್ಣುಗಳನ್ನು ಒಡ್ಡಿಕೊಳ್ಳುವುದರಿಂದ ಅನೇಕ ಕಣ್ಣಿನ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ, ಬೇಸಿಗೆಯಲ್ಲಿ ಕಣ್ಣುಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಹಾಗಾಗಿ ನಿಮ್ಮ ಕಣ್ಣುಗಳನ್ನು ಆರೋಗ್ಯಕರವಾಗಿಡಲು ಮತ್ತು ಬೇಸಿಗೆಯಲ್ಲಿ ಸೋಂಕುಗಳನ್ನು ತಪ್ಪಿಸಲು ವೈದ್ಯರು ತಿಳಿಸಿದ ಈ ಸಲಹೆಗಳನ್ನು ತಪ್ಪದೇ ಪಾಲಿಸಿರಿ.
ಕೈಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ:
ಕಣ್ಣುಗಳನ್ನು ರಕ್ಷಿಸಲು ಸ್ವಚ್ಛವಾದ ಕೈಗಳನ್ನು ಕಾಪಾಡಿಕೊಳ್ಳುವ ಅತಿ ಅಗತ್ಯ. ಕೊಳಕು ಕೈಗಳಿಂದ ಕಣ್ಣುಗಳನ್ನು ಸ್ಪರ್ಶಿಸುವುದರಿಂದ ಬ್ಯಾಕ್ಟೀರಿಯಾ ತಗುಲಿ ಇದು ಸೋಂಕುಗಳಿಗೆ ಕಾರಣವಾಗುತ್ತದೆ. ಆದ್ದರಿಂದ, ಹೊರಗಿನಿಂದ ಬಂದ ತಕ್ಷಣ ನಿಮ್ಮ ಕಣ್ಣುಗಳನ್ನು ಸ್ಪರ್ಶಿಸುವ ಮೊದಲು ಯಾವಾಗಲೂ ನಿಮ್ಮ ಕೈಗಳನ್ನು ಚೆನ್ನಾಗಿ ತೊಳೆಯಿರಿ.
ವೈಯಕ್ತಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳಿ:
ನೈರ್ಮಲ್ಯ ಮತ್ತು ವೈಯಕ್ತಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೇರೆಯವರ ಕರವಸ್ತ್ರಗಳನ್ನು ಬಳಸುವುದನ್ನು ತಪ್ಪಿಸಿ. ಯಾವಾಗಲೂ ನಿಮ್ಮದೇ ಆದ ಸ್ವಚ್ಛವಾದ ಕರವಸ್ತ್ರವನ್ನು ಬಳಸಿ. ಹಾಗೂ ನಿಮ್ಮ ಕರವಸ್ತ್ರಗಳನ್ನು ಬೇರೆಯವರಿಗೆ ಬಳಸಲು ಕೊಡಬೇಡಿ.
ಸೂರ್ಯನ ಕಿರಣಗಳಿಂದ ಕಣ್ಣುಗಳನ್ನು ರಕ್ಷಿಸಿ:
ಸೂರ್ಯನಿಂದ ಬರುವ ಯುವಿ ಕಿರಣಗಳು ಕಣ್ಣುಗಳನ್ನು ಹಾನಿಗೊಳಿಸಬಹುದು. ಹಾಗಾಗಿ ಕಣ್ಣುಗಳನ್ನು ಸುರಕ್ಷಿತವಾಗಿಡಲು ನೀವು ಹೊರಗೆ ಹೋದಾಗಲೆಲ್ಲಾ ಸನ್ಗ್ಲಾಸ್ ಧರಿಸಲು ಮರೆಯಬೇಡಿ.
ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ:
ಆರೋಗ್ಯಕರ ಜೀವನಶೈಲಿ ಮತ್ತು ಸಮತೋಲಿತ ಆಹಾರಕ್ಕೆ ಹೆಚ್ಚು ಮಹತ್ವ ನೀಡಿ. ಇದು ಕಣ್ಣಿನ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಕಳಪೆ ಆಹಾರವನ್ನು ತಿನ್ನುವುದರಿಂದ ಕಣ್ಣುಗಳ ಮೇಲೆ ಕೆಟ್ಟ ಪರಿಣಾಮ ಬೀರುವುದರ ಜೊತೆಗೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಜಂಕ್ ಫುಡ್ ಅನ್ನು ತಪ್ಪಿಸಿ.
ಅತಿಯಾಗಿ ಕಣ್ಣು ತೊಳೆಯುವುದನ್ನು ತಪ್ಪಿಸಿ:
ಪ್ರತಿದಿನ ನೀರಿನಿಂದ ಕಣ್ಣುಗಳನ್ನು ತೊಳೆಯುವುದು ಕೆಲವೊಮ್ಮೆ ಹಾನಿಕಾರಕವಾಗಿದೆ. ಅತಿಯಾಗಿ ಕಣ್ಣುಗಳನ್ನು ತೊಳೆಯುವುದರಿಂದ ಕಣ್ಣುಗಳಲ್ಲಿನ ರಕ್ತನಾಳಗಳನ್ನು ಒಣಗಿಸುತ್ತದೆ. ಆದ್ದರಿಂದ, ನಿಮ್ಮ ಕಣ್ಣುಗಳಲ್ಲಿ ಕೊಳೆ ಬಿದ್ದಾಗ ಮಾತ್ರ ಶುದ್ಧವಾದ ನೀರನಿಂದ ತೊಳೆಯಿರಿ.
ಈ ಅಗತ್ಯ ಸಲಹೆಗಳನ್ನು ಅನುಸರಿಸುವ ಮೂಲಕ, ಬೇಸಿಗೆಯಲ್ಲಿ ಕಣ್ಣಿನ ಸೋಂಕುಗಳನ್ನು ತಪ್ಪಿಸಬಹುದು ಮತ್ತು ನಿಮ್ಮ ಕಣ್ಣುಗಳ ಬಗ್ಗೆ ಸರಿಯಾದ ಕಾಳಜಿ ವಹಿಸಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
