CHITRADURGA NEWS | 02 MAY 2026
ಚಿತ್ರದುರ್ಗ: ಮಕ್ಕಳು ಪುಸ್ತಕಗಳನ್ನು ಓದುವುದರ ಜೊತೆಗೆ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ಸಾಮಾಜಿಕ ಜ್ಞಾನ ಮತ್ತು ಪ್ರಸಕ್ತ ವಿದ್ಯಮಾನಗಳನ್ನು ತಿಳಿಯಬಹುದು ಎಂದು ಯುವ ಪತ್ರಕರ್ತ ಎಸ್.ಎಂ.ಲಿಖಿತ್ ತಿಳಿಸಿದರು.
ಇದನ್ನೂ ಓದಿ: SSLC, PUC ಫಲಿತಾಂಶ | ದಕ್ಷಿಣ ಕರ್ನಾಟಕದಲ್ಲಿ ಚಿತ್ರದುರ್ಗ ಅಗ್ರಸ್ಥಾನ
ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪತ್ರಿಕಾ ಮಾಧ್ಯಮ ಮತ್ತು ಮಕ್ಕಳು ವಿಷಯ ಕುರಿತು ಉಪನ್ಯಾಸ ನೀಡಿದರು.
ಆಧುನಿಕ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಹಾವಳಿಯಲ್ಲಿ ಪತ್ರಿಕೆಗಳ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಪತ್ರಿಕೆಯ ಓದು ನಮ್ಮ ಜ್ಞಾನ ಮಟ್ಟವನ್ನು ಹೆಚ್ಚುಸುತ್ತದೆ.
ಧೀರ್ಘಕಾಲದವರೆಗೆ ನೆನಪಿನಲ್ಲಿ ಉಳಿಯುತ್ತದೆ. ಪತ್ರಿಕೆಯಲ್ಲಿ ಅಚ್ಚಾಗುವ ವಿಷಯ ಒಂದು ದಾಖಲೆಯೂ ಆಗುವುದರಿಂದ ಪತ್ರಿಕಾ ಓದಿಗೆ ಮಹತ್ವವಿದೆ ಎಂದು ಪ್ರತಿಪಾದಿಸಿದರು.
ನಾನು ಕೂಡಾ ಈ ಹಿಂದೆ ಬಾಲ ಭವನದ ಬೇಸಿಗೆ ಶಿಬಿರದ ಶಿಬಿರಾರ್ಥಿಯಾಗಿದ್ದೆ. ಇಂತಹ ಶಿಬಿರಗಳು ನಮ್ಮಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ. ಆದ್ದರಿಂದ ಮಕ್ಕಳು ಹಾಗೂ ಪೋಷಕರು ಬೇಸಿಗೆ ಶಿಬಿರಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಇದನ್ನೂ ಓದಿ: ಮೇ.31 ವರೆಗೆ ಲಿಡ್ಕರ್ ಉತ್ಪನ್ನಗಳ ಮೇಲೆ ಶೇ.15 ರಿಯಾಯಿತಿ ಮಾರಾಟ
ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ. ಶ್ರೀಕುಮಾರ್ ಮಾತನಾಡಿ, ಮಕ್ಕಳಿಗೆ ಬೆಳೆಯುವ ವಯಸ್ಸಿನಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಕಲಿಸುವ ನಿಟ್ಟಿನಲ್ಲಿ ರಾಜ್ಯ ಬಾಲ ಭವನವು ಮಕ್ಕಳಿಗೆ ಶಿಬಿರವವನ್ನು ಹಮ್ಮಿಕೊಂಡಿದೆ. ಇಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳು ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪೂರಕವಾಗಿರುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಬಾಕಸ್ ಶಿಕ್ಷಕ ತಿಪ್ಪೇರುದ್ರಪ್ಪ, ಕರಾಟೆ ಶಿಕ್ಷಕಿ ಚಂದನಾ, ಚಿತ್ರಕಲಾ ಶಿಕ್ಷಕಿ ಮಂಜುಳಾ ಹವನೂರು, ನೃತ್ಯ ಶಿಕ್ಷಕಿ ಕೆ.ಪವಿತ್ರಾ ಮತ್ತಿತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

