Connect with us

    ನಾಳೆ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)

    ಮುಖ್ಯ ಸುದ್ದಿ

    ನಾಳೆ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 25 APRIL 2025

    ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾಗಿರುವುದರಿಂದ ಕೆಪಿಸಿಸಿ ಸೂಚನೆ ಮೇರೆಗೆ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ತಿಳಿಸಿದರು.

    Also Read: ಚಿತ್ರದುರ್ಗ ನಗರಸಭೆ ಸದ್ಯಕ್ಕೆ ಮಹಾನಗರ ಪಾಲಿಕೆ ಆಗದು | ಪೌರಾಯುಕ್ತೆ ಎಂ.ರೇಣುಕಾ

    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಮಧ್ಯಾಹ್ನ 2.30 ಕ್ಕೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಡೆಯಲಿದೆ.

    ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರುಗಳಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮುರಳಿಧರ ಹಾಲಪ್ಪ ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

    ಸರ್ಕಾರದ ಐದು ಗ್ಯಾರೆಂಟಿಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವುದರ ಜೊತೆ ಸಣ್ಣಪುಟ್ಟ ಲೋಪಗಳಿದ್ದಲ್ಲಿ ಸರಿಪಡಿಸಿಕೊಳ್ಳಲಾಗುವುದು ಎಂದು ಹೇಳಿದರು.

    Also Read: ಘೋರಿ ಉಸಿರಾಡುತ್ತಿದೆ | ಚಾದರದೊಳಗಿನಿಂದ ಉಸಿರಾಟ | ಫಕೃಲ್ಲಾ ಶಾ ಖಾದ್ರಿ ಸಮಾಧಿ

    ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳು ಎದುರಾಗುವುದರಿಂದ ಕಾರ್ಯಕರ್ತರು ಸಂಘಟಿತರಾಗುವ ಕುರಿತು ಚರ್ಚಿಸಲಾಗುವುದು.

    ಹಾಲು, ಮೊಸರು, ಉಪ್ಪಿಗೂ ಕೇಂದ್ರ ಸರ್ಕಾರ ಜಿ.ಎಸ್.ಟಿ.ವಿಧಿಸಿದೆ. ಅಡುಗೆ ಅನಿಲ ಜಾಸ್ತಿಯಾಗಿದೆ. ನೀರಿನ ಸಮಸ್ಯೆಯಾಗದಂತೆ 146 ಹಳ್ಳಿಗಳಲ್ಲಿ ಪೈಪ್‍ಲೈನ್ ಅಳವಡಿಕೆಯಾಗಿದ್ದು, ಓವರ್ ಹೆಡ್ ಟ್ಯಾಂಕ್‍ಗಳನ್ನು ಕಟ್ಟಿಸಿ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ಕೊಡುತ್ತೇವೆ.

    ಚಿತ್ರದುರ್ಗದಲ್ಲಿ 23 ಮೀಟರ್‍ನಷ್ಟು ರಸ್ತೆ ಅಗಲೀಕರಣಗೊಳಿಸುವ ಕುರಿತು ನಗರಸಭೆ ಸಾಮಾನ್ಯ ಸಭೆಯಲ್ಲಿ ರೆಸಲೂಷನ್ ಆಗಿದೆ. ಈಗಾಗಲೆ ಎರಡು ಬಾರಿ ಡಿವೈಡರ್‍ಗಳನ್ನು ತೆರವುಗೊಳಿಸಿದ್ದು, ಮೂರನೆ ಹಂತದಲ್ಲಿಯೂ ಅವೈಜ್ಞಾನಿಕ ಡಿವೈಡರ್‍ಗಳನ್ನು ತೆಗೆಸಲಾಗುವುದು ಎಂದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಸರ್ಕಾರದ ಯೋಜನೆಗಳು ಜನತೆಗೆ ಮುಟ್ಟಿದೆಯೋ ಇಲ್ಲವೋ ಎನ್ನುವ ಕುರಿತು ಚರ್ಚಿಸಲಾಗುವುದು. ಮುಂದೆ ನಡೆಯುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷ ಗೆಲ್ಲಬೇಕಾಗಿರುವುದರಿಂದ ಕಾರ್ಯಕರ್ತರಲ್ಲಿ ಹುರುಪು ಮೂಡಿಸಲಾಗುವುದು ಎಂದರು.

    Also Read: ತ್ವಚೆ ನೈಸರ್ಗಿಕವಾಗಿ ಕಾಂತಿಯುತವಾಗಲು ಸೌತೆಕಾಯಿ-ಕರಿಬೇವಿನ ಎಲೆಗಳ ಈ ರಸವನ್ನು ಕುಡಿಯಿರಿ

    ಸುದ್ದಿಗೊಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷರುಗಳಾದ ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಹಕ್ಕು, ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಸುದರ್ಶನ್, ಕೆ.ಡಿ.ಪಿ.ಸದಸ್ಯ ಕೆ.ಸಿ.ನಾಗರಾಜ್ ಸೇರಿದಂತೆ ಇತರರು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top