CHITRADURGA NEWS | 26 JUNE 2024
ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಈ ವರ್ಷ ಚಿತ್ರದುರ್ಗ ಜಿಲ್ಲೆಯು 10ನೇ ಸ್ಥಾನದೊಳಗೆ ಬರುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಸಿರುದ್ಧೀನ್ ಭರವಸೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮ ಪಡಿಸಿ ರಾಜ್ಯಮಟ್ಟದಲ್ಲಿ ಉನ್ನತ ಸ್ಥಾನ ಪಡೆಯುವ ನಿಟ್ಟಿನಲ್ಲಿ ಪ್ರಾರಂಭದಿಂದಲೇ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಇದ್ದೂ ಇಲ್ಲದಂತಾಗಿರುವ ಸಿಸಿ ಕ್ಯಾಮರಾಗಳನ್ನು ಮೊದಲು ರಿಪೇರಿ ಮಾಡಿಸಿ | ವೀರೇಂದ್ರ ಪಪ್ಪಿ ಸೂಚನೆ
ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಮೊದಲ ಸ್ಥಾನದಲ್ಲಿದ್ದ ಚಿತ್ರದುರ್ಗ ಜಿಲ್ಲೆಯು 27ನೇ ಸ್ಥಾನ ಕುಸಿತಕ್ಕೆ ಕಾರಣವೇನು ಎಂದು ಪ್ರಶ್ನಿಸಿದ ಸಚಿವರು, ಡಿಡಿಪಿಐ ಅವರು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು. ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಫಲಿತಾಂಶ ಸುಧಾರಣೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಕುರಿತು ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು.
ಇದನ್ನೂ ಓದಿ: ಬಾಲ್ಯವಿವಾಹ ಮಾಡಿಸುವ ಪುರೋಹಿತರು, ಶಾಮಿಯಾನ, ಭಾಗಿಯಾದವರ ಮೇಲೂ FIR ಹಾಕಿ
ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಕಳೆದ ಬಾರಿ ಚಿತ್ರದುರ್ಗ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಮೇಲಿಂದ ಒಂದನೇ ಸ್ಥಾನದಲ್ಲಿ ಇತ್ತು, ಈ ಬಾರಿ ಕೆಳಗಿನಿಂದ ಒಂದನೇ ಸ್ಥಾನದಲ್ಲಿದೆ ಎಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಶಿಕ್ಷಕರನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಇತರೆ ಕೆಲಸ ಕಾರ್ಯಗಳಿಗೆ ಹೆಚ್ಚಿನದಾಗಿ ಬಳಸಿಕೊಳ್ಳಲಾಗಿದೆ. ಇದು ಫಲಿತಾಂಶ ಇಳಿಮುಖಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.
500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇರುವ ಶಾಲೆಗಳಲ್ಲಿ ಆದ್ಯತೆ ಅನುಸಾರ ಪ್ರಾರ್ಥನಾ ಪ್ರಾಂಗಣ ಹಾಗೂ ಊಟದ ಸಭಾಂಗಣ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ವಿಶೇಷ ಅನುದಾನ ಮಂಜೂರಾತಿಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
