
CHITRADURGA NEWS | 24 JUNE 2025
ಚಿತ್ರದುರ್ಗ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Also Read: ಮಳೆಯ ವರದಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ | ಈ ಸುದ್ದಿ ಓದಿ….
12 ತರಗತಿ ಉತ್ತೀರ್ಣರಾದವರಿಗೆ ಸ್ವಾಗತಗಾರರು, 10ನೇ ತರಗತಿ ಉತ್ತೀರ್ಣರಾದವರಿಗೆ ಆಹಾರ ಮತ್ತು ಪಾನೀಯಗಳ ವಿತರಣೆ, 8ನೇ ತರಗತಿ ಉತ್ತೀರ್ಣರಾದವರಿಗೆ ವಿವಿಧ ಆಹಾರ ತಯಾರಿಕೆ ಹಾಗೂ 5ನೇ ತರಗತಿ ಉತ್ತೀರ್ಣರಾದವರಿಗೆ ಕೊಠಡಿ ನಿರ್ವಹಣೆ ತರಬೇತಿ ನೀಡಲಾಗುವದು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐಹೆಚ್‌ಎ(ಇನ್ಸಿ÷್ಟಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೆಂಟ್) ಮತ್ತು ಎಫ್.ಸಿ.ಐ (ಫುಡ್ ಕ್ರಾಫ್ಟ್ ಇನ್ಸಿ÷್ಟಟ್ಯೂಟ್) ಮೂಲಕ ಬೆಂಗಳೂರು ಹಾಗೂ ಮೈಸೂರಿನಲ್ಲಿ ತರಬೇತಿ ನೀಡಲಾಗುವುದು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು 20 ರಿಂದ 45 ವರ್ಷದೊಳಗಿರಬೇಕು. ತರಬೇತಿ ವೇಳೆ ಊಟ, ವಸತಿ ಹಾಗೂ ಪ್ರೋತ್ಸಾಹಧನ ನೀಡಲಾಗುವುದು. ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಸೇವಾ ಸಿಂದೂ ಪೋರ್ಟಲ್ sevasindhu.karnataka.gov.in ಹಾಗೂ ಬಾಪೂಜಿ ಸೇವಾ ಕೇಂದ್ರ bsk.karnataka.gov.in ಟಿ ಮೂಲಕ ಪ್ರವಾಸೋದ್ಯಮ ವೆಬ್‌ಸೆಟ್ karnatakatourism.org ಅರ್ಜಿ ಸಲ್ಲಿಸಬಹುದು.
Also Read: ವಿಕಲಚೇತನರಿಗೆ ಸಾಧನ ಸಲಕರಣೆ ವಿತರಿಸಿದ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 08194-234466, ಮೊಬೈಲ್ ಸಂಖ್ಯೆ 8660556443, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರ ಮೊಬೈಲ್ ಸಂಖ್ಯೆ 9901948850 ಕರೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
