ಮೊಳಕಾಳ್ಮೂರು
TP officer suspended: ತಾಲ್ಲೂಕು ಪಂಚಾಯಿತಿ ಅಧಿಕಾರಿ ಅಮಾನತು | ಕರ್ತವ್ಯಕ್ಕೆ ಅನಧಿಕೃತ ಗೈರು
CHITRADURGA NEWS | 28 SEPTEMBER 2024
ಚಿತ್ರದುರ್ಗ: ಕರ್ತವ್ಯಕ್ಕೆ ಅನಧಿಕೃತ ಗೈರು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರು 2024ರ ಆಗಸ್ಟ್ 8 ರಿಂದ 13 ರವರೆಗೆ ಅನಧಿಕೃತ ಗೈರು ಹಾಜರಾಗಿದ್ದರು. ಈ ಕುರಿತಂತೆ ನೌಕರರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿತ್ತು.
ಕ್ಲಿಕ್ ಮಾಡಿ ಓದಿ: ಶೋಭಾಯಾತ್ರೆಯಲ್ಲಿ ಖಾಕಿ ಪಡೆ ಹೈ ಆಲರ್ಟ್ | ಪ್ರಮುಖ ಸ್ಥಳಗಳಲ್ಲಿ ಡಾಗ್ ಸ್ಕ್ವಾಡ್ ಪಹರೆ
2024ರ ಆಗಸ್ಟ್ 14 ರಿಂದ 21 ರವರೆಗೆ ಮೇಲಾಧಿಕಾರಿಗಳ ಅನುಮತಿ ಪಡೆಯದೇ ಪುನಃ ಕರ್ತವ್ಯಕ್ಕೆ ಗೈರಾಗಿದ್ದರು. ಮೇಲಾಧಿಕಾರಿಗಳ ಅನುಮತಿ ಪಡೆಯದೇ ಕರ್ತವ್ಯಕ್ಕೆ ಗೈರಾಗುವುದರಿಂದ ನೌಕರನ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ವರದಿ ಸಲ್ಲಿಸಿದ್ದರು.
ಕ್ಲಿಕ್ ಮಾಡಿ ಓದಿ: ಶೋಭಾಯಾತ್ರೆಯಲ್ಲಿ ನಟರ ಫ್ಯಾನ್ಸ್‌ಗಳ ಅಬ್ಬರ | ರಾರಾಜಿಸುತ್ತಿವೆ ಕೇಸರಿ ಬಾವುಟ
ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಕೆಸಿಎಸ್ (ಸಿಸಿಎ) ನಿಯಮಾವಳಿ-1957ರ ನಿಯಮ-10(1) ರನ್ವಯ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದು, ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.