
ಚಿತ್ರದುರ್ಗ ನ್ಯೂಸ್.ಕಾಂ: ಎಂ.ಸ್ಯಾಂಡ್ ಲೋಡ್ ಮಾಡಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‍ನ ಇಂಜಿನ್ ಹಾಗೂ ಟ್ರೈಲರ್ ನಡುವೆ ಸಿಲುಕಿ ಚಾಲಕ ಮೃತಪಟ್ಟಿರುವ ಘಟನೆ ಕುರುಮರಡಿಕೆರೆ ಬಳಿ ನಡೆದಿದೆ. ಮೃತ ವ್ಯಕ್ತಿ ಚಿತ್ರದುರ್ಗದ ಮಾರುತಿ ನಗರ ನಿವಾಸಿ ಮಹಮ್ಮದ್ ಖಾನ್(30) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಗಣಿ ಕಂಪನಿಯಲ್ಲಿ ಹಿಟಾಚಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವು | ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಂಬಂಧಿಕರು

ಚಿತ್ರದುರ್ಗ ತಾಲೂಕಿನ ಕುರುಮರಡಿಕೆರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಶನಿವಾರ ಎಂ.ಸ್ಯಾಂಡ್ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‍ನ ಇಂಜಿನ್ ಎತ್ತರದ ಪ್ರದೇಶದಲ್ಲಿ ವೇಗವಾಗಿ ಸಾಗಿದಾಗ ಎದ್ದು ನಿಂತಿದ್ದು, ಈ ವೇಳೆ ಚಾಲಕ ಇಂಜಿನ್ ಹಾಗೂ ಟ್ರೈಲರ್ ನಡುವೆ ಸಿಲುಕಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ | ದಾವಣಗೆರೆಯಲ್ಲಿ ಡಿಜೆ ಸೀಕ್ರೇಟ್ ರಿವಿಲ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
