
CHITRADURGA NEWS | 02 FEBRUARY 2024
ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ಟ್ರ್ಯಾಕ್ಟರ್‍ಗೆ KSRTC ರಾಜಹಂಸ ಬಸ್ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನಸುಕಿನಲ್ಲಿ ನಡೆದಿದೆ.
ಬಸ್ಸಿನಲ್ಲಿದ್ದ ಸುಮಾರು ಹತ್ತು ಜನರು ಗಾಯಗೊಂಡಿದ್ದು, ಮೂರು ಮಂದಿಯ ಸ್ಥಿತಿ ಗಂಭಿರವಾಗಿದೆ. ಗಾಯಾಳುಗಳನ್ನು ಚಳ್ಳಕೆರೆ ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಕೇಂದ್ರ ಬಜೆಟ್‍ನಲ್ಲಿ ಚಿತ್ರದುರ್ಗಕ್ಕೆ ರೈಲ್ವೇಗೆ ಬಂಪರ್
ಮೊಳಕಾಲ್ಮೂರು ಕಡೆಯಿಂದ ಚಳ್ಳಕೆರೆ ಕಡೆಗೆ ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‍ಗೆ ಹಿಂದಿನಿಂದ ಬಸ್ ಡಿಕ್ಕಿಯಾಗಿದೆ.
ಗುಲ್ಬರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜಹಂಸ ಬಸ್ ಇದಾಗಿದ್ದು, ಗಾಯಗೊಂಡವರು ಒಂದೇ ಕುಟುಂಬದವರು ಎನ್ನಲಾಗಿದೆ.
ಇದನ್ನೂ ಓದಿ: ಅರ್ಚಕ ನಿಧನ | ಜಾಲಿಕಟ್ಟೆ ಚೌಡೇಶ್ವರಿ ದೇವಿ ಜಾತ್ರೆ ರದ್ದು
ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ರಸ್ತೆಯಲ್ಲಿ ಅಡ್ಡ ಬಿದ್ದಿದ್ದು, ಸಂಪೂರ್ಣ ಜಖಂ ಆಗಿದೆ.
ಈ ಭಾರೀ ಅಪಘಾತದಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಆಗಿಲ್ಲ. ಘಟನಾ ಸ್ಥಳಕ್ಕೆ ತಳುಕು ಪೊಲೀಸರು ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
