ಮುಖ್ಯ ಸುದ್ದಿ
Nayakanahatty: ನೀರಿನಲ್ಲಿ ಸಿಲುಕಿದ ಟ್ರ್ಯಾಕ್ಟರ್ | ನಾಯಕನಹಟ್ಟಿ ಹೊರಮಠ ಜಲಾವೃತ | ಗ್ರಾಮದೊಳಗೆ ನುಗ್ಗಿದ ನೀರು
CHITRADURGA NEWS | 22 OCTOBER 2024
ಚಿತ್ರದುರ್ಗ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ನಾಯಕನಹಟ್ಟಿ ಪೊಲೀಸ್ ಠಾಣೆಯೊಳಗೆ ನೀರು ನುಗ್ಗಿರುವುದು ಒಂದು ಕಡೆಯಯಾದರೆ, ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರಮಠ ಜಲಾವೃತವಾಗಿದೆ.
ಇದನ್ನೂ ಓದಿ: ನಾಯಕನಹಟ್ಟಿ ಪೊಲೀಸ್ ಠಾಣೆ ಮತ್ತೆ ನೀರುಪಾಲು | ಮೊಳಕಾಲುದ್ದ ನೀರು ತುಂಬಿ ಪೊಲೀಸರ ಪರದಾಟ
ನಾಯಕನಹಟ್ಟಿ ಭಾಗದಲ್ಲಿ ಸಾಕಷ್ಟು ಮಳೆಯಾಗಿದ್ದು, ಗ್ರಾಮದ ಒಳಗಿನಿಂದ ನೀರು ಭಾರೀ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಇಲ್ಲಿನ ದೊಡ್ಡ ಹಳ್ಳ ತುಂಬಿ ಹರಿಯುತ್ತಿದೆ.
ಮೊಳಕಾಲ್ಮೂರು ತಾಲೂಕಿನಲ್ಲೂ ಸಾಕಷ್ಟು ಮಲೆಯಾಗಿದ್ದು, ಗಜ್ಜುಗಾನಹಲ್ಳಿ ಬಳಿ ರಸ್ತೆಯಲ್ಲಿ ನೀರು ಹರಿಯುತ್ತಿರುವುದು ಹಳ್ಳದಂತೆ ಭಾಸವಾಗುತ್ತಿದೆ.
ಇದನ್ನೂ ಓದಿ: ಪ್ರಾಣ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸರ ತ್ಯಾಗ ಸ್ಮರಣೀಯ | ಡಿಸಿ ವೆಂಕಟೇಶ್
ಸೈಜುಗಲ್ಲು ತುಂಬಿದ್ದ ಟ್ರ್ಯಾಕ್ಟರ್ ನೀರಿನ ರಭಸಕ್ಕೆ ಸಿಲುಕಿ ಪರದಾಡುವ ವಾತಾವರಣ ನಿರ್ಮಾಣವಾಗಿದೆ.
ಇಲ್ಲಿಗೆ ಸಮೀಪದ ಕೋಡಿಹಳ್ಳಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದು, ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ತಿಪ್ಪಯ್ಯನಕೋಟೆ ಗ್ರಾಮದ ಒಳಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ಇದನ್ನೂ ಓದಿ: ಜಿಲ್ಲೆಯಲ್ಲಿ 48 ಮನೆ ಹಾನಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆ