CHITRADURGA NEWS | 02 SEPTEMBER 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಬಹಳಷ್ಟು ಟ್ರ್ಯಾಕ್ಟರ್‍ಗಳಿಗೆ ಪ್ರತಿಫಲನ (ರಿಫ್ಲೆಕ್ಟರ್) ಸ್ಟಿಕರ್ ಅಳವಡಿಸದೇ ಇರುವುದರಿಂದ, ರಾತ್ರಿ ವೇಳೆ ಟ್ರಾಕ್ಟರ್‍ಗಳು ಗೋಚರಿಸದ ಕಾರಣ ಅಪಘಾತಗಳು ಸಂಭವಿಸುತ್ತಿವೆ. ಈ ಹಿಂದೆಯೂ ಈ ಬಗ್ಗೆ ಕ್ರಮ ಕೈಗೊಳ್ಳುವುಂತೆ ತಿಳಿಸಲಾಗಿದ್ದರೂ, ಪರಿಣಾಮಕಾರಿಯಾಗಿ ಜಾರಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ: ಹಿರಿಯೂರು ನಗರ, ಟೋಲ್ ಬಳಿಯಿರುವ ಗೂಡಂಗಡಿ ತೆರವಿಗೆ ಡಿಸಿ ಗಡುವು
ಉತ್ತರಿಸಿದ ಆರ್‍ಟಿಒ ಭರತ್ ಕಾಳೆಸಿಂಗೆ ಅವರು, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 25205 ಟ್ರಾಕ್ಟರ್‍ಗಳು ಹಾಗೂ 151 ವಾಣಿಜ್ಯ ಟ್ರ್ಯಾಕ್ಟರ್‍ಗಳು ಇವೆ. ಆರ್‍ಸಿ ಅವಧಿ ಮುಗಿದಿರುವ ಹಳೆ ಟ್ರಾಕ್ಟರ್‍ಗಳು, ನವೀಕರಣಕ್ಕೂ ಬಾರದೆ ಸಂಚರಿಸುತ್ತಿವೆ. ಕೃಷಿ ಉಪಯೋಗಕ್ಕಾಗಿ ಎಂದು ನೊಂದಣಿಯಾಗಿರುವ ಟ್ರ್ಯಾಕ್ಟರ್‍ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡುತ್ತಿರುವುದು ಕೂಡ ಕಂಡುಬಂದಿದೆ. ಹಂತ ಹಂತವಾಗಿ ಇಂತಹ ಟ್ರ್ಯಾಕ್ಟರ್‍ಗಳನ್ನು ಪತ್ತೆ ಮಾಡಿ, ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ನಾಗರಾಜ್, ನಗರಸಭೆ ಪೌರಾಯುಕ್ತೆ ರೇಣುಕಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
