ಮುಖ್ಯ ಸುದ್ದಿ
ಜಿಮ್ ಫಿಟ್ನೆಸ್, ನಿರೂಪಣಾ, ವಾರ್ತಾ ವಾಚಕ ತರಬೇತಿ ಶಿಬಿರ | ಅರ್ಜಿ ಆಹ್ವಾನ
CHITRADURGA NEWS | 24 JANUARY 2025
ಚಿತ್ರದುರ್ಗ: 2024-25ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವ ಜನರಿಗೆ ಅನುಷ್ಠಾನಗೊಳಿಸಲಿರುವ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜ.24 ಅರ್ಜಿ ಸಲ್ಲಿಸಲು ಕೊನೆಯ ದಿನ.
Also Read: ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್ ಮತ್ತು ನಿರೂಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.
ದ್ವಿತೀಯ ಪಿಯುಸಿ ಪಾಸ್ ಅಥವಾ ಫೇಲ್ ಆದ 18 ರಿಂದ 40 ವರ್ಷ ವಯೋಮಿತಿಯರಿಗೆ 2025ರ ಜ.27 ರಿಂದ ಫೆ.10 ರವರೆಗೆ 15 ದಿನಗಳ ಕಾಲ ಜಿಮ್ ಫಿಟ್ನೆಸ್ ತರಬೇತಿಯು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ 18 ರಿಂದ 40 ವರ್ಷ ವಯೋಮಿತಿಯವರಿಗೆ 2025ರ ಫೆ.11 ರಿಂದ 18 ರವರೆಗೆ 8 ದಿನಗಳ ಕಾಲ ನಿರೂಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರವು ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ನಡೆಯಲಿದೆ.
ತರಬೇತಿ ಶಿಬಿರಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿಯ ಯುವ ಜನರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಇದೇ ಜ.24 ರೊಳಗೆ ಕಚೇರಿಗೆ ಸಲ್ಲಿಸಬೇಕು.
ತರಬೇತಿ ಶಿಬಿರಗಳಲ್ಲಿ ಭಾಗವಹಿಸುವವರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಈ ಶಿಬಿರದಲ್ಲಿ ಭಾಗವಹಿಸುವವರಿಗೆ ಸಾಮಾನ್ಯ ವಸತಿ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-235635 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.