CHITRADURGA NEWS | 06 MARCH 2026
ಚಿತ್ರದುರ್ಗ: ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಲಿಷ್ಠ ಸಂಘಟನೆ ಕಟ್ಟಲು ಪ್ರಶಿಕ್ಷಣ ವರ್ಗ ಅತ್ಯಗತ್ಯ. ಇಲ್ಲಿ ಪಡೆದ ಶಿಕ್ಷಣದಿಂದ ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳಾಗಲು ಸಾಧ್ಯ ಎಂದು ಶಾಸಕ ಡಾ.ಎಂ. ಚಂದ್ರಪ್ಪ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ಇದನ್ನೂ ಓದಿ: ಕೋಟೆನಾಡಿನಲ್ಲಿ ಭೀಮಗಾಯನ ಮಾರ್ಚ್ 07ಕ್ಕೆ
ನಗರದ ಜಗಲೂರು ಮಹಾಲಿಂಗಪ್ಪ ಕನ್ವೆನ್ಶನ್ ಸಭಾಂಗಣದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ-2026ರ ಜಿಲ್ಲಾ ಮಟ್ಟದ ಯೋಜನಾ ಸಭೆಯಲ್ಲಿ ಮಾತನಾಡಿದರು.
ಪಕ್ಷದ ತತ್ವ, ಸಂಘಟನೆ ಶಕ್ತಿ ಹಾಗೂ ಕಾರ್ಯಪದ್ದತಿಯ ಬಗ್ಗೆ ಸಮಗ್ರ ತರಬೇತಿ ನೀಡುವ ಮಹತ್ವದ ಅಭಿಯಾನವಾಗಿದ್ದು, ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಕಾರ್ಯಕರ್ತರ ಸಾಮರ್ಥ್ಯ ವೃದ್ಧಿಗೆ ದಿಕ್ಕು ತೋರಿಸುವ ವೇದಿಕೆಯಾಗಿದೆ. ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ. ನಮ್ಮಲ್ಲಿ ಲಕ್ಷಾಂತರ ಸಮರ್ಪಿತ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ ಎಂದರು.
ನಮ್ಮಲ್ಲಿ ಕಾರ್ಯಕರ್ತರು ವಿವಿಧ ಹುದ್ದೆಗಳನ್ನು ಅಲಂಕರಿಸುತ್ತಿದ್ದಾರೆ. ಬೇರೆ ಪಕ್ಷದವರಂತೆ ಒಂದೇ ಕುಟುಂಬದವರು ಅಧ್ಯಕ್ಷರಾಗಲು ನಮ್ಮಲ್ಲಿ ಅವಕಾಶ ಇಲ್ಲ, ಇಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ತಳಮಟ್ಟದಿಂದ ಬಂದವರು. ರೈಲ್ವೆ ನಿಲ್ದಾಣಗಳಲ್ಲಿ ಚಹಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಇಂದು ದೇಶದ ಪ್ರಧಾನಿಯಾಗಿರುವುದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.
ಇದನ್ನೂ ಓದಿ: ಕರ್ನಾಟಕ ಮಾಧ್ಯಮ ಅಕಾಡೆಮಿ | ಪತ್ರಕರ್ತೆಯರಿಗೆ ವಿಶೇಷ ತರಬೇತಿ | ಅರ್ಜಿ ಅಹ್ವಾನ
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್.ಮೋಹನ್ ಕುಮಾರ್ ಮಾತನಾಡಿ, ಪಕ್ಷದ ಕಾರ್ಯಕರ್ತರ ವ್ಯಕ್ತಿತ್ವನ್ನು ನಿರ್ಮಾಣ ಮಾಡುವ ಪ್ರಶಿಕ್ಷಣ ಮಹಾ ಅಭಿಯಾನ ಇದಾಗಿದೆ. ಅಭಿಯಾನದಲ್ಲಿ ಸಕ್ರೀಯವಾಗಿ ಭಾಗವಹಿಸಿ ವಿಷಯ ತಿಳಿದುಕೊಂಡು ಬೂತ್ ಮಟ್ಟದಲ್ಲಿ ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಈ ರೀತಿಯ ಪ್ರಶಿಕ್ಷಣ ವರ್ಗ ರಾಷ್ಟ್ರ, ರಾಜ್ಯ ಜಿಲ್ಲಾ ತಾಲ್ಲೂಕು, ಮಂಡಳಗಳಲ್ಲೂ ನಡೆಸುವ ಮೂಲಕ ಕಾರ್ಯಕರ್ತರಿಗೆ ಪ್ರೇರಣೆ ನೀಡಲಾಗುವುದು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ಪಕ್ಷದ ಕಾರ್ಯಕರ್ತರ ವ್ಯಕ್ತಿತ್ವ ನಿರ್ಮಾಣಕ್ಕೆ ಶಿಬಿರ ಸಹಾಯವಾಗಲಿದೆ. ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕಿದೆ. ಮುಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ನಡೆಯಬೇಕಿದೆ.
ಪಕ್ಷದ ತತ್ವ ಸಿದ್ದಾಂತಗಳಿಂದ ಪಕ್ಷದ ಕಾರ್ಯ ಉತ್ತಮ ವ್ಯಕ್ತಿಯಾಗಲು ಸಾಧ್ಯ. ಚಿತ್ರದುರ್ಗ ಜಿಲ್ಲೆಯಲ್ಲಿ 18 ಪ್ರಶಿಕ್ಷಣ ವರ್ಗಗಳನ್ನು ಮಾಡಬೇಕಿದೆ. ಇದರಲ್ಲಿ ಭಾಗವಹಿಸುವ ಮೂಲಕ ಉತ್ತಮ ಕಾರ್ಯಕರ್ತರ ಪಡೆ ನಿರ್ಮಾಣವಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ: 4ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ | ಭದ್ರೆಗೆ ಅನುದಾನಕ್ಕೆ ಬಿಗಿಪಟ್ಟು
ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಬಾಳೆಕಾಯಿ ರಾಮದಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗೀರಿಶ್, ಮಂಜುನಾಥ್, ರೇಖಾ, ಪಂಪ, ಶೈಲೇಶ್ ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
