
CHITRADURGA NEWS | 22 JULY 2026
ಚಿತ್ರದುರ್ಗ: ಹವಾಮಾನ ವೈಪರೀತ್ಯ ಹಾಗೂ ನೀರಿನ ಅಭಾವದ ಹಿನ್ನೆಲೆಯಲ್ಲಿ ಅಡಿಕೆ ಮತ್ತು ತೆಂಗಿನ ತೋಟಗಳನ್ನು ಉಳಿಸಿಕೊಳ್ಳುವ ಹಾಗೂ ತೇವಾಂಶ ಸಂರಕ್ಷಣೆ ಮಾಡುವ ಕುರಿತು ತೋಟಗಾರಿಕೆ ಇಲಾಖೆ ವತಿಯಿಂದ ಸೋಮವಾರ ಚಿತ್ರದುರ್ಗ ತಾಲೂಕಿನ ಕಸಬಾ ಹೋಬಳಿಯ ಜಾನಕೊಂಡ ಮತ್ತು ಜೆ.ಎನ್. ಕೋಟೆ ಗ್ರಾಮಗಳಲ್ಲಿ ಕ್ಷೇತ್ರ ತರಬೇತಿ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: ಆರೋಗ್ಯ ಇಲಾಖೆಯ ಸೇವೆಗಳನ್ನು ತಾಯಂದಿರು ಸದುಪಯೋಗ ಪಡಿಸಿಕೊಳ್ಳಿ | ಡಾ.ಬಿ.ವಿ.ಗಿರೀಶ್
ಎಲ್ ನಿನೋ ಪರಿಣಾಮದಿಂದಾಗಿ ಮಳೆ ಅಭಾವ ಎದುರಾಗಿದ್ದು, ಜಿಲ್ಲೆಯಲ್ಲಿ ತೀವ್ರ ಉಷ್ಣಾಂಶ ಹೆಚ್ಚಿ ನೀರಿನ ಕೊರತೆ ಉಂಟಾಗಿದೆ. ಇದರಿಂದ ಅಡಿಕೆ ಮತ್ತು ತೆಂಗು ಬೆಳೆಗಳ ಬೆಳವಣಿಗೆ ಕುಂಠಿತಗೊಂಡು, ರೈತರ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಲಭ್ಯವಿರುವ ನೀರನ್ನು ವೈಜ್ಞಾನಿಕವಾಗಿ ಬಳಸಿ, ತೇವಾಂಶ ಕಾಪಾಡಿಕೊಳ್ಳುವ ತಂತ್ರಜ್ಞಾನಗಳ ಬಗ್ಗೆ ರೈತರಿಗೆ ಪ್ರಾಯೋಗಿಕವಾಗಿ ವಿವರಿಸಲಾಯಿತು.
ತೆಂಗು ಮತ್ತು ಅಡಿಕೆ ಗಿಡಗಳ ಬುಡದಲ್ಲಿ ಸಿಪ್ಪೆಗಳನ್ನು ಹೂಳುವುದು, ಒಣ ಎಲೆಗಳು ಹಾಗೂ ಹಸಿರು ಗೊಬ್ಬರದ ಎಲೆಗಳಿಂದ ಮಲ್ಚಿಂಗ್ (ಹೊದಿಕೆ) ಮಾಡುವುದು, ಕೊಟ್ಟಿಗೆ ಗೊಬ್ಬರ ಅಥವಾ ಕಾಂಪೋಸ್ಟ್ ಮಾಡಿದ ‘ಕಾಯರ್ ಪಿಥ್’ ಮಣ್ಣಿನಲ್ಲಿ ಸೇರಿಸುವುದು ಮತ್ತು ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ನೀರಿನಲ್ಲಿ ಕರಗುವ ಪೋಷಕಾಂಶಗಳನ್ನು ಒದಗಿಸುವುದರಿಂದ ಬರದ ಪರಿಣಾಮವನ್ನು ಕಡಿಮೆ ಮಾಡಬಹುದು ಎಂದು ತಿಳಿಸಲಾಯಿತು.
ತರಬೇತುದಾರರಾಗಿ ಭಾಗವಹಿಸಿದ್ದ ಹಿರಿಯೂರು ತಾಲೂಕು ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಓಂಕಾರಪ್ಪ ಮಾತನಾಡಿ, ಬರದ ಸಮಯದಲ್ಲಿ ಅಡಿಕೆ ಮತ್ತು ತೆಂಗು ಬೆಳೆಗಳಲ್ಲಿ ಕಂಡುಬರುವ ಕೀಟ ಹಾಗೂ ರೋಗ ಬಾಧೆಗಳು ಮತ್ತು ಅವುಗಳ ಹತೋಟಿ ಕ್ರಮಗಳ ಬಗ್ಗೆ ವಿವರಣೆ ನೀಡಿದರು.
ಇದನ್ನೂ ಓದಿ: ಶಂಕರಾಚಾರ್ಯರ ಬಗ್ಗೆ ಅವಹೇಳನ ಹೇಳಿಕೆ ಖಂಡಿಸಿ ಪ್ರತಿಭಟನೆ
ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಡಾ. ದೇವರಾಜು, ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಸುರೇಶ್, ವೆಂಕಟೇಶ್ ನಾಯ್ಕ್, ಜಾನಕೊಂಡ ಗ್ರಾಮದ ಪ್ರಗತಿಪರ ರೈತರಾದ ಅಶೋಕ, ಮಹಾಲಿಂಗಪ್ಪ, ಆನಂದಪ್ಪ, ಶಿವಲಿಂಗಪ್ಪ, ಸುರೇಶ ಹಾಗೂ ಜೆ.ಎನ್. ಕೋಟೆ ಗ್ರಾಮದ ರೈತರಾದ ಮಂಜುನಾಥ, ಸುರೇಶ, ರುದ್ರಮುನಿಯಪ್ಪ, ನಿಂಗಪ್ಪ, ಪ್ರಸನ್ನಕುಮಾರ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಲವಾರು ರೈತರು ಭಾಗವಹಿಸಿ ತಮ್ಮ ಶಂಕೆಗಳನ್ನು ಪರಿಹರಿಸಿಕೊಂಡರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

