CHITRADURGA NEWS | 04 MARCH 2026
ಚಿತ್ರದುರ್ಗ: ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (PMRKVY) ಯಡಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು 3 ದಿನಗಳ ತರಬೇತಿಯನ್ನು ಇದೇ ಮಾರ್ಚ್ 05 ರಿಂದ 07 ರವರೆಗೆ ಚಿತ್ರದುರ್ಗ ತಾಲ್ಲೂಕಿನ ಆಸಕ್ತ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಮೂರು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ: ಮೀಸಲಾತಿ ಕಡಿತದ ಮೂಲಕ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ದ್ರೋಹ | ಕೆ.ಟಿ. ಕುಮಾರಸ್ವಾಮಿ ಆಕ್ರೋಶ
ತರಬೇತಿ ಕಾರ್ಯಕ್ರಮದಲ್ಲಿ ಮೊದಲನೇ ದಿನ ನೆಟಾಫಿಮ್ ಸಂಸ್ಥೆಯ ಬೇಸಾಯ ಶಾಸ್ತ್ರಜ್ಞರಾದ ಅಂಜಿನಪ್ಪ ಅವರು ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳಗಳಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಸಮರ್ಪಕ ಅಳವಡಿಕೆ ಮತ್ತು ಅವುಗಳ ನಿರ್ವಹಣೆ ಹಾಗೂ ರಸಾವರಿ ಪದ್ಧತಿ ಕುರಿತು ಮಾಹಿತಿ ನೀಡುವರು.
ಎರಡನೇ ದಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಹಾಗೂ ಕೀಟಶಾಸ್ತ್ರಜ್ಞರಾದ ಡಾ. ದಾನ ರೆಡ್ಡಿ ಅವರು ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಕುರಿತು ಮಾಹಿತಿ ನೀಡುವರು. ನಂತರ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕರಾದ ಇಂದೂಧರ ಅವರು ಸಾವಯವ ಪದ್ಧತಿಯಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ನೀರು ಮತ್ತು ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿ ನೀಡುವರು.
ತರಬೇತಿಯ ಮೂರನೇ ದಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಒಬ್ಬೂರಿನ ಶ್ರೀ ಹನುಮಂತ ನಾಯಕ್ ಅವರು ಜೇನು ಕೃಷಿ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬ ನಿರ್ವಹಣೆ ಹಾಗೂ ಎರೆ ಗೊಬ್ಬರ ತಯಾರಿಕೆ ಕುರಿತು ಕುರಿತು ಮಾಹಿತಿ ನೀಡುವರು.
ಇದನ್ನೂ ಓದಿ: ಅಡಿಕೆ ಧಾರಣೆ | 3 ಮಾರ್ಚ್ | ರಾಶಿ, ಕೆಂಪಡಕೆ, ಬೆಟ್ಟೆ, ಚಾಲಿ ರೇಟ್ ?
ಆದ ಪ್ರಯುಕ್ತ ಆಸಕ್ತ 50 ಜನ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೋಂದಾಯಿಸಿಕೊಂಡು ತಮ್ಮ ಆಧಾರ್ ಅಥವಾ ಎಫ್‍ಐಡಿ ಯೊಂದಿಗೆ ಈ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನಿಕಾಂತ ಆರ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
