ರೈತರಿಗೆ ನ್ಯಾನೋ ಯುರಿಯಾ, DAP ಮತ್ತು ಡ್ರೋಣ್ ಬಳಕೆ ಕುರಿತು ತರಬೇತಿ 

ಜಿಲ್ಲಾ ಕೃಷಿ ತರಬೇತಿ ಕೇಂದ್ರ

CHITRADURGA NEWS | 27 JUNE 2025

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜೂನ್ 28ರಂದು ಬೆಳಿಗ್ಗೆ 10ಕ್ಕೆ ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ರೈತರಿಗೆ ಕೃಷಿಯಲ್ಲಿ ನ್ಯಾನೋಯುರಿಯಾ, ನ್ಯಾನೋ ಡಿಎಪಿ ಹಾಗೂ ಡ್ರೋಣ್ ಬಳಕೆ ಕುರಿತು ಒಂದು ದಿನದತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Also Read: ಅಡಿಕೆ ಧಾರಣೆ | ಜೂನ್‌ 26 | ಯಾವ ಅಡಿಕೆಗೆ ಎಷ್ಟು ರೇಟ್‌

ಇಫ್ಕೋ ಸಂಸ್ಥೆಯ ಕ್ಷೇತ್ರ ಅಧಿಕಾರಿ ಚಿದಂಬರಮೂರ್ತಿ ಕುಲಕರ್ಣಿ ಅವರು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ನ್ಯಾನೋಯುರಿಯಾ ನ್ಯಾನೋ ಡಿಎಪಿ ಬಳಕೆಯ ಮಹತ್ವ ಹಾಗೂ ವಿವಿಧ ಕೃಷಿ ಮತ್ತುತೋಟಗಾರಿಕೆ ಬೆಳೆಗಳಲ್ಲಿ ಪೋಷಕಾಂಶ ಮತ್ತು ಪೀಡೆನಾಶಕ ಸಿಂಪರಣೆಗೆ ಡ್ರೋಣ್ ಬಳಸುವ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.

ನಂತರ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಪೋಷಕಾಂಶ ಮತ್ತು ಪೀಡೆನಾಶಕ ಸಿಂಪರಣೆಗೆ ಡ್ರೋಣ್ ಬಳಕೆಯ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ 50 ಜನರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಹಾಗೂ ಮುಖ್ಯಸ್ಥ ಆರ್.ರಜನೀಕಾಂತ ತಿಳಿಸಿದ್ದಾರೆ.

Also Read: ಜಿಲ್ಲೆಗೆ ಮತ್ತೊಂದು ಏಕಲವ್ಯ ವಸತಿ ಶಾಲೆಗೆ ಮನವಿ | ಜೆ.ಪಿ.ನಡ್ಡಾಗೆ ಗೋವಿಂದ ಕಾರಜೋಳ ಪತ್ರ

ಮೊದಲು ನೋಂದಾವಣಿ ಮಾಡಿಕೊಂಡ 50 ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್‍ನೊಂದಿಗೆ ತರಬೇತಿಗೆ ಹಾಜರಾಗಬೇಕು ಎಂದು ಕೋರಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version