Connect with us

TRAINING; ಸೂರ್ಯಕಾಂತಿ ಬೆಳೆ‌‌ ಚೆನ್ನಾಗಿ ಬೆಳೆಯಲು ತರಬೇತಿ

District Agricultural Training Centre

ಮುಖ್ಯ ಸುದ್ದಿ

TRAINING; ಸೂರ್ಯಕಾಂತಿ ಬೆಳೆ‌‌ ಚೆನ್ನಾಗಿ ಬೆಳೆಯಲು ತರಬೇತಿ

CHITRADURGA NEWS | 25 JULY 2024

ಚಿತ್ರದುರ್ಗ: ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಹೈದರಬಾದ್‌ನ ಭಾರತೀಯ ಎಣ್ಣೆ ಕಾಳು ಬೆಳೆಗಳ ಸಂಶೋಧನಾ ಕೇಂದ್ರ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಅಖಿಲ ಭಾರತೀಯ ಸುಸಂಘಟಿತ ಸೂರ್ಯಕಾಂತಿ ವಿಭಾಗದ ವತಿಯಿಂದ ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜುಲೈ 29ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಸೂರ್ಯಕಾಂತಿ ಮತ್ತು ಹರಳು ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆಗಳು ಕುರಿತು ಒಂದು ದಿನದ ತರಬೇತಿ(TRAINING) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: Hospitals; ನೊಂದಣಿ ಇಲ್ಲದ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷ್ಯಣ್ಯ ಕ್ರಮ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ

ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದ ಸೂರ್ಯಕಾಂತಿ ತಳಿ ಅಭಿವೃದ್ಧಿ ವಿಜ್ಞಾನಿ ಡಾ.ಎಸ್.ಡಿ.ನೆಹರು, ಬೇಸಾಯಶಾಸ್ತ್ರಜ್ಞ ಡಾ.ಕೆ.ಎಸ್.ಸೋಮಶೇಖರ್, ಸಸ್ಯರೋಗ ಶಾಸ್ತ್ರಜ್ಞ ಡಾ.ಸಿ.ಪಿ.ಮಂಜುಳಾ ಅವರು “ಸೂರ್ಯಕಾಂತಿ ಮತ್ತು ಹರಳು ಬೆಳೆಯ ಬೆಳೆಗಳ ಸುಧಾರಿತ ಬೇಸಾಯ ಕ್ರಮಗಳು, ಈ ಬೆಳೆಗಳಲ್ಲಿ ಬರುವ ಪ್ರಮುಖ ಕೀಟ ಮತ್ತು ರೋಗಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು.

ಆಸಕ್ತ 70 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಆರ್, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿಕೇಂದ್ರ, ಬಬ್ಬೂರು ಫಾರಂ (8277931058), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (9845249832) ಮತ್ತು ಪವಿತ್ರಾ ಎಂ. ಜೆ. (9535412286) ರವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಇದನ್ನೂ ಓದಿ: Renukaswamy murder case: ಜೀವನ ನಿರ್ವಹಣೆ ಕಷ್ಟ ಆಗಿದೆ | ಸರ್ಕಾರಿ ಕೆಲಸ ನೀಡಿ | ರೇಣುಕಾಸ್ವಾಮಿ ಪತ್ನಿ ಮನವಿ

ಮೊದಲು ನೋಂದಾವಣಿ ಮಾಡಿಕೊಂಡ 70 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‌ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಬೇಕು ಎಂದು ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಮನವಿ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version